ಬಿಜೆಪಿ, ಕಾಂಗ್ರೆಸ್​ ಚುನಾವಣಾ ಪ್ರಚಾರ ರದ್ದು

0
275

ದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ನಡೆಯಬೇಕಿದ್ದ ಎಲ್ಲ ಪ್ರಚಾರ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಹಾಗೂ ಬಿಜೆಪಿ ರದ್ದುಗೊಳಿಸಿದೆ. ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯ ಹಿನ್ನೆಲೆ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಮಧ್ಯಪ್ರದೇಶದ ಇತಾರ್ಸಿಯಲ್ಲಿ ನಡೆಯಬೇಕಿದ್ದ ಪ್ರಧಾನಿ ಮೋದಿ ಅವರ ಸಾರ್ವಜನಿಕ ಸಭೆಯನ್ನು ರದ್ದು ಮಾಡಲಾಗಿದೆ.

ಜಿ-20 ದೇಶಗಳ ಪ್ರತಿನಿಧಿಗಳ ಜೊತೆ ನಿಗದಿಪಡಿಸಲಾಗಿದ್ದ ಭೋಜನಕೂಟವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ನಿನ್ನೆ ರಾತ್ರಿ ರದ್ದುಗೊಳಿಸಿದ್ದಾರೆ. ನಿನ್ನೆ ಸಂಜೆ ಪ್ರಿಯಾಂಕ ಗಾಂಧಿ ಅವರು ತಮ್ಮ ಮೊದಲ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಿ, ರಾಜಕೀಯದ ಬಗ್ಗೆ ಮಾತನಾಡಲು ಇದು ಸೂಕ್ತ ಸಮಯ ಅಲ್ಲ ಅಂತ ಹೇಳಿದ್ದರು.

ಇಂದು ಬೆಳಗ್ಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಗೃಹ ಸಚಿವ ರಾಜನಾಥ್​ ಸಿಂಗ್​, ವಿತ್ತ ಸಚಿವ ಅರುಣ್​ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವಾರಜ್​, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಸೇರಿದಂತೆ ಮೂವರು ಸೇನಾ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here