Home ದೇಶ-ವಿದೇಶ ಸೋಂಕು ಪ್ರಕರಣ ಹೆಚ್ಚಳ : ವಿರೋಧ ಪಕ್ಷದ ನಾಯಕರು, ಮಾಜಿ ಪ್ರಧಾನಿ, ರಾಷ್ಟ್ರಪತಿಗಳಿಗೆ ಕರೆ ಮಾಡಿದ...

ಸೋಂಕು ಪ್ರಕರಣ ಹೆಚ್ಚಳ : ವಿರೋಧ ಪಕ್ಷದ ನಾಯಕರು, ಮಾಜಿ ಪ್ರಧಾನಿ, ರಾಷ್ಟ್ರಪತಿಗಳಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಭೀಕರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರು ವಾರಗಳ ಕಾಲ ಲಾಕ್​ಡೌನ್ ಘೋಷಿಸಿದ್ದು, ಲಾಕ್​ಡೌನ್ ಕೊನೆಗೊಳ್ಳಲು ಇನ್ನು ಒಂದು ವಾರ ಅಷ್ಟೆ ಬಾಕಿ ಇದೆ. ಇದರ ನಡುವೆ ಮೋದಿ ವಿರೋಧ ಪಕ್ಷದ ನಾಯಕರು, ಮಾಜಿ ಪ್ರಧಾನಿ, ರಾಷ್ಟ್ರಪತಿಗಳ ಜೊತೆಗೆ ದೂರವಾಣಿ ಕರೆ ಮೂಲಕ ಚರ್ಚೆ ನಡೆಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಹೆಚ್. ಡಿ ದೇವೇಗೌಡ ಸೇರಿದಂತೆ ವಿರೋಧ ಪಕ್ಷದ ಎಲ್ಲಾ ಹಿರಿಯ ಮುಖಂಡರೊಂದಿಗೂ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ಮುಲಾಯಂ ಸಿಂಗ್, ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ವರಿಷ್ಠೆ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾದ ಬಿಜು ಪಟ್ನಾಯಕ್, ಕೆಸಿಆರ್, ಎಂ.ಕೆ ಸ್ಟಾಲಿನ್ ಹಾಗೂ ಪ್ರಕಾಶ್ ಸಿಂಗ್ ಬಾದಲ್​ ಅವರೊಂದಿಗೂ ಮಾತುಕತೆ ನಡೆಸಿದ್ದಾರೆ.

ಮೋದಿಯವರು ಲಾಕ್​ಡೌನ್ ಘೋಷಿಸುವ ಮೊದಲು ಯಾರೊಂದಿಗೂ ಚರ್ಚೆ ನಡೆಸದೆ ತೀರ್ಮಾನ ತೆಗೆದುಕೊಂಡಿದ್ದರು. ಹಾಗಾಗಿ ಇದರ ಬಗ್ಗೆ ಹಲವಾರು ಟೀಕೆಗಳು ಕೇಳಿ ಬಂದಿದ್ದವು. ಆದರೆ ಈಗ ಕೋವಿಡ್-19 ವೈರಸ್ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಹಾಗೂ ಲಾಕ್​ಡೌನ್​ ನಂತರದ ನಿರ್ಧಾರದ ಬಗ್ಗೆ ಮೋದಿ ಚರ್ಚೆ ನಡೆಸಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments