Home ದೇಶ-ವಿದೇಶ ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ - ನಾಳೆ ಬದರಿನಾಥಕ್ಕೆ ಭೇಟಿ

ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ – ನಾಳೆ ಬದರಿನಾಥಕ್ಕೆ ಭೇಟಿ

ನವದೆಹಲಿ: ಪ್ರಧಾನಿ ಮೋದಿ ಎರಡು ದಿನದ ಉತ್ತರಾಖಂಡ್ ಯಾತ್ರೆಯನ್ನು ಕೇದಾರನಾಥಕ್ಕೆ ಭೇಟಿ ಕೊಡುವ ಮೂಲಕ ಇಂದು ಆರಂಭಿಸಿದ್ದಾರೆ. ನಾಳೆ ಮಧ್ಯಾಹ್ನ ದೆಹಲಿಗೆ ಮರಳುವ ಮುನ್ನ ಅವರು ಬದರಿನಾಥದಲ್ಲೂ ಪೂಜೆ ಸಲ್ಲಿಸಲಿದ್ದಾರೆ. ಮೋದಿಯಿಂದ ಕೇದಾರನಾಥನಿಗೆ ವಿಶೇಷ ಪೂಜೆ , ರುದ್ರಾಭಿಷೇಕ ನಡೆದಿದೆ. ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಲಿದ್ದು, ಇಂದು ಕೇದಾರನಾಥನಲ್ಲಿಯೇ ಮೋದಿ ವಾಸ್ತವ್ಯ ಹೂಡಲಿದ್ದಾರೆ.

ಮೋದಿ ಆಗಮನ ಹಿನ್ನೆಲೆ ದೇವಸ್ಥಾನದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮೋದಿ ಅವರ ಅಧಿಕಾರಾವಧಿಯಲ್ಲಿ ಹಲವು ಬಾರಿ ಅವರು ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ನವೆಂಬರ್​ನಲ್ಲಿ ದೀಪಾವಳಿ ಸಂದರ್ಭ ಮೋದಿ ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ.

ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನ ನಾಳೆ ನಡೆಯಲಿದ್ದು, ಒಂದು ದಿನ ಮುನ್ನ ಪ್ರಧಾನಿ ಮೋಸಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಾಳೆ 59 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, 23ರಂದು ಫಲಿತಾಂಶ ಹೊರಬೀಳಲಿದೆ. ಅಧಿಕೃತ, ಕೆಲಸಕ್ಕೆ ಸಂಬಂಧಿಸಿದ ಯಾತ್ರೆಗಳು ಮಾಡಬಹುದು. ಆದರೆ ಚುನಾವಣಾ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಅಂತ ಚುನಾವಣಾ ಆಯೋಗ ಪ್ರಧಾನಿ ಅವರಿಗೆ ನೆನಪಿಸಿದ್ದಾರೆ.

ಕೇದಾರನಾಥ ಮಂದಿರದ ಅಭಿವೃದ್ಧಿಗೆ ಮೆಗಾ ಪ್ಲಾನ್​ ರೆಡಿಯಾಗಿದ್ದು, ಯೋಜನೆಯ ಜಾರಿ ಬಗ್ಗೆ ಪ್ರಧಾನಿ ಮೋದಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆಯುತ್ತಿದ್ದಾರೆ. 2013ರಲ್ಲಿ ಮಹಾಮಳೆಗೆ ಕೇದಾರನಾಥ ಕ್ಷೇತ್ರದಲ್ಲಿ ನಾಶ, ನಷ್ಟ ಸಂಭವಿಸಿತ್ತು. ಇದೀಗ ಅಂದಾಜು 700 ಕೋಟಿ ವೆಚ್ಚದಲ್ಲಿ ಕೇದಾರನಾಥ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್​ ಪ್ಲಾನ್​ ರೆಡಿಯಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments