ಬೆಂಗಳೂರು: ರೂಪಾಂತರಗೊಂಡ ಕೊರೋನಾ ವೈರಸ್ ಕಟ್ಟಿಹಾಕಲು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಎಲ್ಲ ಸಿಎಂಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ.
ಶುಕ್ರವಾರ ಬೆಳೆಗ್ಗೆ 11 ರಿಂದ 12 ಗಂಟೆವರೆಗೆ ಪ್ರಧಾನಿ ಮೋದಿಯವರು ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಎರಡು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಒಂದು ರೂಪಾಂತರಗೊಂಡ ವೈರಸ್ ಬಗ್ಗೆ ಮಾತುಕತೆ. ರೈತರ ಹೋರಾಟ ಕುರಿತು ಕೇಂದ್ರದ ನಿರ್ಧಾರಗಳ ಬಗ್ಗೆ ಚರ್ಚೆ. ಗಡಿ ಮತ್ತು ದೇಶದ ಆರ್ಥಿಕತೆ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ಮಾಡುವ ಸಾದ್ಯತೆ ಇದೆ.