Home ದೇಶ-ವಿದೇಶ ವಿದ್ಯಾಸಾಗರ್ ಪ್ರತಿಮೆ ನಿರ್ಮಾಣಕ್ಕೆ ಮೋದಿ ಭರವಸೆ

ವಿದ್ಯಾಸಾಗರ್ ಪ್ರತಿಮೆ ನಿರ್ಮಾಣಕ್ಕೆ ಮೋದಿ ಭರವಸೆ

ನವದೆಹಲಿ: 19ನೇ ಶತಮಾನದ ಸಮಾಜ ಸುಧಾರಕ ಈಶ್ವರ​ ಚಂದ್ರ ವಿದ್ಯಾಸಾಗರ್​ ಅವರ ಪ್ರತಿಮೆಯನ್ನು ನಿರ್ಮಿಸಲಾಗುತ್ತದೆ ಅಂತ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಾತನಾಡಿದ ಅವರು, “ನಾವು ವಿದ್ಯಾಸಾಗರ್​ ಅವರ ಧ್ಯೇಯಗಳಿಗೆ ಬದ್ಧರಾಗಿದ್ದೇವೆ. ಈ ಹಿಂದೆ ಪ್ರತಿಮೆ ಇದ್ದಂತಹ ಜಾಗದಲ್ಲಿಯೇ ಪಂಚಲೋಹದ ಪ್ರತಿಮೆಯನ್ನು ನಿರ್ಮಿಸುತ್ತೇವೆ. ಅಮಿತ್​ ಶಾ ಅವರ ರೋಡ್​ ಶೋನಲ್ಲಿ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿಯನ್ನು ಮತ್ತೊಮ್ಮೆ ನಾವು ನೋಡಿದ್ದೇವೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ವಿದ್ಯಾಸಾಗರ ಕಾಲೇಜು ಸಮೀಪ ರೋಡ್ ಶೋ ನಡೆಸುವ ವೇಳೆ ವಿದ್ಯಾಸಾಗರ್​ ಪ್ರತಿಮೆಗೆ ಹಾನಿಯಾಗಿದೆ. 19ನೇ ಶತಮಾನದ ಸಮಾಜ ಸುಧಾರಕ ಈಶ್ವರ​ ಚಂದ್ರ ವಿದ್ಯಾಸಾಗರ್​ ಬಗ್ಗೆ ಪಶ್ಚಿಮ ಬಂಗಾಳದ ಜನ ವಿಶೇಷ ಗೌರವವನ್ನು ಇಟ್ಟುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments