Home ದೇಶ-ವಿದೇಶ ರಾಮಮಂದಿರ ಭೂಮಿಪೂಜೆ   ನೆರವೇರಿಸಿದ ಪ್ರಧಾನಿ | ಭಾಷಣದ ವೇಳೆ ಶ್ರವಣಬೆಳಗೊಳ ಉಲ್ಲೇಖಿಸಿದ ಮೋದಿ..!

ರಾಮಮಂದಿರ ಭೂಮಿಪೂಜೆ   ನೆರವೇರಿಸಿದ ಪ್ರಧಾನಿ | ಭಾಷಣದ ವೇಳೆ ಶ್ರವಣಬೆಳಗೊಳ ಉಲ್ಲೇಖಿಸಿದ ಮೋದಿ..!

ಅಯೋಧ್ಯೆ :  ಪ್ರಧಾನಮಂತ್ರಿ ನರೇಂದ್ರ ಮೋದಿ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಪೂಜೆ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಕರ್ನಾಟಕದ ಶ್ರವಣಬೆಳಗೊಳವನ್ನು ಉಲ್ಲೇಖಿಸಿದರು.

ರಾಮನ ಅಸ್ತಿತ್ವವನ್ನು ನಾಶ ಮಾಡುವ ಪ್ರಯತ್ನ ನಡೆದಿತ್ತು. ರಾಮ ನಮ್ಮ ಜೊತೆಗಿದ್ದ. ಶ್ರೀರಾಮನಿಗೆ ಎಲ್ಲರೂ ಒಂದೇ. ಆತ ಭಾರತದ ಏಕತೆಯ ಪ್ರತಿರೂಪ ಎಂದರು.

ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಈ ಐತಿಹಾಸಿಕ ಕ್ಷಣವಿದು. ಕನ್ಯಾಕುಮಾರಿಯಿಂದ ಕ್ಷೀರಭವಾನಿಯವರೆಗೆ, ಕೋಟೇಶ್ವರದಿಂದ ಕಾಮಾಖ್ಯದವರೆಗೆ, ಜಗನ್ನಾಥನಿಂದ ಕೇದಾರನಾಥದವರೆಗೆ, ಸೋಮನಾಥದವರೆಗೆ, ಕಾಶಿ ವಿಶ್ವನಾಥ, ಶಿಖರ್ಜಿಯಿಂದ ಶ್ರವಣ ಬೆಳೆಗೊಳದವರೆಗೆ ಇಂದು ಇಡೀ ರಾಷ್ಟ್ರ ವಿಶ್ವ ಭಗವಾನ್​ ರಾಮನ ಘೋಷಣೆಯಲ್ಲಿ ಮುಳುಗಿದೆ ಅಂತ ಹೇಳಿದರು.

ಟೆಂಟ್​ನಲ್ಲಿದ್ದ ಶ್ರೀರಾಮನಿಗೆ ಭವ್ಯವಾದ ದೇವಾಲಯ ನಿರ್ಮಾಣವಾಗಲಿದೆ. ರಾಮಮಂದಿರ ನಮ್ಮ ಸಂಪ್ರದಾಯಗಳ ಆಧುನಿಕ ಸಂಕೇತವಾಗಲಿದೆ. ರಾಷ್ಟ್ರೀಯ ಭಾವನೆ, ಭಕ್ತಿಯ ಸಂಕೇತವಾಗಲಿದೆ . ಇತಿಹಾಸ ಸೃಷ್ಟಿಯಾಗುತ್ತಿಲ್ಲ. ಬದಲಾಗಿ ಅದು ಪುನರಾವರ್ತನೆಯಾಗುತ್ತಿದೆ. ದೇವಾಲಯ ನಿರ್ಮಾಣವಾಗುವುದರ ಜೊತೆಗೆ ಇಲ್ಲಿ ಹೊಸ ಆರ್ಥಿಕ ಅವಕಾಶಗಳು ತೆರೆಯಲಿವೆ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments