Home ದೇಶ-ವಿದೇಶ ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ದೇಶದಾದ್ಯಂತ ಘೋಷಣೆಯಾಗಿರುವ ಲಾಕ್​ಡೌನ್ ಆದೇಶವು ಏಪ್ರಿಲ್ 14ರಂದು ಅಂತ್ಯಗೊಳ್ಳಲಿದ್ದು, ಇದರ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಬೆಳಗ್ಗೆ 10 ಗಂಟೆಗೆ  ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

21 ದಿನದ ಲಾಕ್​ಡೌನ್ ಆದೇಶ ನಾಳೆಗೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15 ರ ಬಳಿಕ ಏನು ಎಂಬುದು ಎಲ್ಲರ ಪ್ರಶ್ನೆಯಾಗಿದೆ. ಮುಂದಿನ ದಿನಗಳಲ್ಲಿ ಲಾಕ್​ಡೌನ್ ವಿಸ್ತರಣೆ ಅಥವಾ ಸಡಿಲಿಕೆಯಾವುದರ ಬಗ್ಗೆ ಕೇಂದ್ರ ಸರ್ಕಾರವೇ ನಿರ್ಧಾರವನ್ನು ಕೈಗೊಳ್ಳಬೇಕು. ರಾಜ್ಯ ಸರ್ಕಾರಗಳ ನಿರ್ಧಾರವು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ನಿಂತಿದೆ. ಹಾಗಾಗಿ ನಾಳೆ ಪ್ರಧಾನಿ ಮೋದಿ ಈ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.

ಇನ್ನು ಶನಿವಾರ ದೇಶದ 13 ರಾಜ್ಯಗಳ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಬಹುತೇಕ ರಾಜ್ಯ ಮುಖ್ಯಮಂತ್ರಿಗಳು ಏಪ್ರಿಲ್ 14 ರ ಬಳಿಕ ಲಾಕ್​ಡೌನ್ ಅನ್ನು ಮುಂದುವರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.ಹಾಗಾಗಿ ನಾಳೆ ಲಾಕ್ ಡೌನ್ ಕುರಿತು ಇನ್ನಷ್ಟು ವಿಚಾರಗಳನ್ನು ಹಂಚಿಕೊಳ್ಳಲಿದ್ದು, ಆರ್ಥಿಕ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತಿಳಿಸುವ ಸಾಧ್ಯತೆ ಇದೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments