ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರ್ತೀವಿ: ಮೋದಿ

0
274

ನವದೆಹಲಿ: 5 ವರ್ಷಗಳ ಕಾಲ ಆಡಳಿತ ನಡೆಸಿದ ಈ ಸರ್ಕಾರ ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಮರಳಲಿದೆ ಅಂತ ಪ್ರಧಾನಿ ಮೋದಿ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕಿಂತ ಎರಡು ದಿನ ಮುನ್ನ ಕ್ಲೈಮ್ಯಾಕ್ಸ್​ ಹಂತದಲ್ಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ- ಅಮಿತ್​ ಶಾ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಒಮ್ಮೆ ಪುರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸರ್ಕಾರ ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ವಿರಳ. ನಾವು ಮತ್ತೊಮ್ಮೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ” ಅಂತ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮಿತ್​ ಶಾ ಮಾತನಾಡಿ, “ನಾವು ಮತ್ತೊಂದು ಬಾರಿ ಇನ್ನಷ್ಟು ಹೆಚ್ಚಿನ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. ಇಂದು ಚುನಾವಣಾ ಪ್ರಚಾರ ಕೊನೆಗೊಂಡಿದೆ. ಪ್ರಚಾರಕ್ಕೆ ಶ್ರಮಿಸಿದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ.

ಪ್ರಧಾನಿ ಮೋದಿಯವರಿಗೆ ಕೇಳಿದ ಮೊದಲ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಶಿಸ್ತಿನ ಸಿಪಾಯಿ. ಪಕ್ಷದ ಅಧ್ಯಕ್ಷರೇ ನನಗೆಲ್ಲವೂ ಆಗಿದ್ದಾರೆ” ಅಂತ ಹೇಳಿದ್ರು. ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅಮಿತ್​ ಶಾ ಅವರು, “ನಿಮ್ಮ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ. ಎಲ್ಲ ಪ್ರಶ್ನೆಗಳಿಗೆ ಪ್ರಧಾನಿಯವರು ಉತ್ತರಿಸಬೇಕೆಂದಿಲ್ಲ” ಅಂತ ಹೇಳಿದ್ದಾರೆ. ಸಾಧ್ವಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅಮಿತ್​ ಶಾ, ಈಗಾಗಲೇ ಮೂವರು ಬಿಜೆಪಿ ನಾಯಕರಿಗೂ ಈ ಸಂಬಂಧ ನೋಟಿಸ್​ ಕಳುಹಿಸಲಾಗಿದೆ ಅಂತ ಹೇಳಿದ್ದಾರೆ.

LEAVE A REPLY

Please enter your comment!
Please enter your name here