ಸ್ಯಾಂಡಲ್ವುಡ್ನ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಬಹುನಿರೀಕ್ಷಿತ ಪೊಗರು ಸಿನಿಮಾದ ಆಡಿಯೋ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಪೊಗರು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಯಿತು. ಹಾಗಾಗಿ ಸಿನಿಮಾ ಯಾವಾಗ ತೆರೆಮೇಲೆ ಬರಲಿದೆ. ಯಾವಾಗ ಆಡಿಯೋ ಲಾಂಚ್ ಆಗಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಇದೀಗ ಒಂದು ಸಿಹಿಸುದ್ದಿ ಸಿಗುತ್ತಿದೆ. ಇದೇ ತಿಂಗಳ ಕೊನೆಯಲ್ಲಿ ಸಿನಿಮಾದ ಆಡಿಯೋ ಲಾಂಚ್ ಆಗಲಿದೆ.
ಚಂದನ್ ಶೆಟ್ಟಿ ಪೊಗರು ಸಿನಿಮಾದ ಸಂಗೀತ ಸಂಯೋಜನೆಯನ್ನು ಮಾಡಿದ್ದು, ವಿ. ಹರಿಕೃಷ್ಣ ಬ್ಯಾಗ್ರೌಂಡ್ ಸ್ಕೋರ್ ಮಾಡಿದ್ದಾರೆ. ಹಾಗಾಗಿ ಚಿತ್ರದ ಹಾಡುಗಳ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ.
ಇನ್ನು ರಶ್ಮಿಕಾ ಮಂದಣ್ಣ ಸಿನಿಮಾದ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದು, ಯಜಮಾನ ಸಿನಿಮಾದ ಬಳಿಕ ರಶ್ಮಿಕಾ ಮಂದಣ್ಣ ನಟಿಸಿರುವ ಕನ್ನಡ ಸಿನಿಮಾ ಇದಾಗಿದೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.