Home ರಾಜ್ಯ ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಮನೆ, ಮನೆಗೆ ಹಾಲು ವಿತರಣೆಗೆ ಪೊಲೀಸರ ಅಡ್ಡಿ..!  

ಶಿವಮೊಗ್ಗ: ನಗರ ಪ್ರದೇಶದ ಮನೆಮನೆಗಳಿಗೆ ಹಾಲು ಮಾರಾಟ ಮಾಡುವ ರೈತರಿಗೂ ಬಿಡದೇ ಪೊಲೀಸರು, ದರ್ಪ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. 

ಹಾಲು, ತರಕಾರಿ ಮನೆಮನೆಗೆ ತೆರಳಿ ಮಾರಾಟ ಮಾಡಬಹುದು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಕೂಡ, ಮನೆ ಮನೆಗೆ ಹಾಲು ಹಾಕುವವರಿಗೆ ನಿರ್ಬಂಧಿಸಲಾಗಿದೆ.  ಶಿವಮೊಗ್ಗದ ಹೊರವಲಯದ ಪುರಲೆ, ಚಿಕ್ಕಲ್ ಗ್ರಾಮಗಳ ಭಾಗದ ಸುಮಾರು 12 ಕ್ಕೂ ಹೆಚ್ಚು ಹಾಲು ಮಾರಾಟಗಾರರು ತಮ್ಮ ಅಳಲು ವ್ಯಕ್ತಪಡಿಸಿದ್ದು, ಹಾಲು ವಿತರಿಸಿಲ್ಲ ಎಂದರೆ, ಮಕ್ಕಳು, ವೃದ್ಧರಿಗೆ ತೊಂದರೆಯಾಗಲಿದೆ.  ಬೆಳ್ಳಂಬೆಳಿಗ್ಗೆ ಹಾಲಿಗಾಗಿ ಜನರು ಕಾಯುತ್ತಿರುತ್ತಾರೆ.  ನಾವು ಈ ಹಾಲು ವಿತರಿಸಲೇಬೇಕು.  ಸುಮಾರು 1 ವರೆ ಸಾವಿರ ಲೀ. ಗೂ ಹೆಚ್ಚು ಹಾಲು ಏನು ಮಾಡೋಣ ಎಂದು ರೈತರು ತಮ್ಮ ಅಳಲು ವ್ಯಕ್ತಪಡಿಸಿದ್ದಾರೆ. 

ಮನೆ ಮನೆಗೆ ತರಕಾರಿ, ಹಾಲು ವಿತರಿಸಲು ಅವಕಾಶ ಇದ್ದು, ಆದರೂ, ಹಾಲು ಮಾರಾಟಗಾರ ರೈತರಿಗೆ ಪೊಲೀಸರು, ನಿರ್ಬಂಧಿಸಿದ್ದು, ಪೊಲೀಸರ ವಿರುದ್ಧ ಇದೀಗ ಹಾಲು ಮಾರಾಟಗಾರ ರೈತರು ಆಕ್ರೋಶ ವ್ಯಕ್ತಪಡಿಸಿದರು.  ಈ ಕೂಡಲೇ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ರೈತರಿಗೆ ಹಾಲು ಮಾರಾಟ ಮಾಡಲು ಅಡ್ಡಿ ಮಾಡದಂತೆ, ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

‘ಈ ಗ್ರಾಮದಲ್ಲಿ ಎಲ್ಲರಿಗೂ ಕಷಾಯ ಉಚಿತ’

ಗದಗ : ಕೊರೊನಾ ನಿರ್ಮೂಲನೆಗೆ ಗ್ರಾಮ ಪಂಚಾಯತಿಯೊಂದು ವಿಭಿನ್ನ ಹಾಗೂ ವಿನೂತನ ಪ್ರಯತ್ನ ನಡೆಸಿದೆ. ಈಗಾಗಲೇ ರಾಜ್ಯದಲ್ಲಿ ಹಲವು ಗ್ರಾಮ‌ ಪಂಚಾಯತಿಗಳು ಕೊರೋನಾ ನಿರ್ಮೂಲನೆಗೆ ಅತ್ಯುನ್ನತ ಹಾಗೂ ವಿನೂತನ ಕಾರ್ಯಗಳನ್ನ ಮಾಡಿ ಮಾದರಿ...

‘ವಿಚಿತ್ರ ರೋಗಕ್ಕೆ ನವಜಾತ ಶಿಶು ಬಲಿ’

ಬೆಂಗಳೂರು : ಕೊರೋನಾದಿಂದ ಗುಣಮುಖವಾದ ಮಕ್ಕಳನ್ನು ಈಗ ಹೊಸದೊಂದು ರೋಗ ಕಾಡುತ್ತಿದೆ. ಪುಟ್ಟ ಮಕ್ಕಳಲ್ಲೇ ಈ ರೋಗ ಹೆಚ್ಚಾಗಿ ಕಂಡು ಬರುತ್ತಿದ್ದು, ಪೋಷಕರು ಕಂಗಾಲಾಗಿದ್ದಾರೆ. ಈ ರೋಗಕ್ಕೆ ಚಿಕಿತ್ಸೆ ನೀಡಲು ಒಂದು ಮಗುವಿಗೆ...

ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ : ಕ್ಯಾಮ್ಸ್ ತೀರ್ಮಾನ

ಬೆಂಗಳೂರು : ಖಾಸಗಿ ಶಾಲಾ ಶುಲ್ಕದಲ್ಲಿ ಕಡಿತ ಮಾಡುವ ಪ್ರಮೇಯವೇ ಇಲ್ಲ. ಪೂರ್ತಿ ಶುಲ್ಕ ಕಟ್ಟಲೇ ಬೇಕು ಎಂದು ವರ್ಚುವಲ್ ಮೀಟಿಂಗ್ ನಲ್ಲಿ ಕ್ಯಾಮ್ಸ್ ತೀರ್ಮಾನ ಕೈಗೊಂಡಿದೆ. ವರ್ಚುವಲ್ ಮೀಟಿಂಗ್ ನಲ್ಲಿ 10ಕ್ಕೂ...

ಬೈಕ್‌ ಅಪಘಾತದಲ್ಲಿ ನಟ ಸಂಚಾರಿ ವಿಜಯ್‌ ಗೆ ಗಂಭೀರ ಗಾಯ..

ಬೆಂಗಳೂರು :  ರಾಷ್ಟ್ರ ಪ್ರಶಸ್ತಿ ನಟ ಸಂಚಾರಿ ವಿಜಯ್ ಗೆ ಅಪಘಾತವಾಗಿದ್ದು, ಸಂಚಾರಿ ವಿಜಯ್ ಸ್ಥಿತಿ ಚಿಂತಾಜನಕವಾಗಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ಸಂಚಾರಿ ವಿಜಯ್ ತಲೆಗೆ...

Recent Comments