Thursday, October 6, 2022
Powertv Logo
Homeರಾಜ್ಯಹಿರಿಯ ಸಾಹಿತಿ ಡಾ.ಚಿದಾನಂದ ಮೂರ್ತಿ ನಿಧನಕ್ಕೆ ಗಣ್ಯರ ಸಂತಾಪ

ಹಿರಿಯ ಸಾಹಿತಿ ಡಾ.ಚಿದಾನಂದ ಮೂರ್ತಿ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದ ಮೂರ್ತಿ ವಿಧಿವಶರಾಗಿದ್ದು, ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್​.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. 

ಕನ್ನಡಕ್ಕೆ ಮಿಡಿಯುತ್ತಿದ್ದ ಲೇಖಕ, ಸಂಶೋಧಕ, ಚಿಂತಕ ಚಿಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ. ಆ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಗರುಡ ಡಾ.ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸವನ್ನು ಕಳೆದುಕೊಂಡಿದೆ. ಚಿಮೂ ಎಂದೇ ಖ್ಯಾತರಾಗಿದ್ದಹಿರಿಯ ಜೀವ ನಾಡುನುಡಿಜಲಕ್ಕಾಗಿ ಶ್ರಮಿಸಿದವರು ಎಂದು ಹೆಚ್​.ಡಿ ಕುಮಾರಸ್ವಾಮಿ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ನಾಡು ಸದಾ ಅವರನ್ನು ಸ್ಮರಿಸುತ್ತದೆ ಎಂದು ಸಂತಾಪ ಸೂಚಿಸಿದ್ದಾರೆ.

ಚಿದಾನಂದ ಮೂರ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸದಾನಂದ ಗೌಡ ಖ್ಯಾತ ಸಂಶೋಧಕ, ಸತ್ಯನಿಷ್ಠ ಹೋರಾಟಗಾರ, ವಚನ ಸಾಹಿತ್ಯ, ಭಾಷಾಶಾಸ್ತ್ರದ ವಿದ್ವಾಂಸರ ಅಗಲಿಕೆ ಕನ್ನಡ ಸಾರಸ್ವತ ಲೋಕದಲ್ಲಿ ಶೂನ್ಯವನ್ನು ಸೃಷ್ಟಿಸಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಸಾಹಿತಿ ಚಿದಾನಂದ ಮೂರ್ತಿ ಅವರ ಅಗಲಿಕೆಗೆ ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಟ್ವೀಟ್ ಮಾಡಿದ್ದಾರೆ.

 

5 COMMENTS

LEAVE A REPLY

Please enter your comment!
Please enter your name here

- Advertisment -

Most Popular

Recent Comments