Home ದೇಶ-ವಿದೇಶ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರಕ್ಕೆ ಬ್ರೇಕ್..!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರಕ್ಕೆ ಬ್ರೇಕ್..!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಮಾಡಬೇಕು ಅಂತಿದ್ದ ಪಕ್ಷಗಳಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ. ಒಂದು ದಿನಕ್ಕೂ ಮುಂಚೆಯೇ ಪ್ರಚಾರ ನಿಲ್ಲಿಸಲು ಸೂಚಿಸಿರುವ ಚುನಾವಣಾ ಆಯೋಗ ಇಂದು ರಾತ್ರಿ 10 ಗಂಟೆಯ ತನಕ ಮಾತ್ರ ಬಹಿರಂಗ ಪ್ರಚಾರಕ್ಕೆ ಅನುಮತಿ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಅರಾಜಕತೆ ಇದೆ ಅಂತ ಆರೋಪಿಸಿದ್ದ ಬಿಜೆಪಿ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸಿದ್ದರೆ, ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ನಿರ್ಧಾರ ಪಶ್ಚಿಮ ಬಂಗಾಳದ ಜನರಿಗಾದ ಅವಮಾನ ಅಂತ ಕಿಡಿಕಾರಿದ್ದಾರೆ.

“ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಎರಡು ಸಭೆಗಳನ್ನು ನಡೆಸಲಿದ್ದಾರೆ. ಅವರ ಸಭೆಗಳು ಮುಗಿದಾಗ ಚುನಾವಣಾ ಪ್ರಚಾರವೂ ಮುಗಿಯಲಿದೆ. ಅಮಿತ್​ ಶಾ ಅವರನ್ನು ಶಿಕ್ಷಿಸುವ ಬದಲು ಚುನಾವಣಾ ಆಯೋಗ ಬಿಜೆಪಿಗೆ ಗಿಫ್ಟ್​ ನೀಡಿದೆ” ಅಂತ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಂಗಳವಾರ ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಶಾ ಅವರ ರೋಡ್​ ಶೋ ಸಂದರ್ಭ 19ನೇ ಶತಮಾನದ ಸಮಾಜ ಸುಧಾರಕ ಈಶ್ವರ ಚಂದ್ರ ವಿದ್ಯಾಸಾಗರ ಅವರ ಪ್ರತಿಮೆ ಕೆಡವಿದ ಘಟನೆಯ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಇಂತಹದೊಂದು ಸೂಚನೆ ಹೊರಡಿಸಿದೆ. ಮೇ 19ರಂದು ನಡೆಯಲಿರುವ ಕೊನೆ ಹಂತದ ಮತದಾನ ನಡೆಯಲಿದ್ದು, ಪರಿಸ್ಥಿತಿ ನಿಯಂತ್ರಿಸುವ ದೃಷ್ಟಿಯಿಂದ ಚುನಾವಣಾ ಆಯೋಗ ಈ ರೀತಿ ಕ್ರಮ ಕೈಗೊಂಡಿದೆ.

ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನದಲ್ಲಿ ಪಶ್ಚಿಮ ಬಂಗಾಳದ 9 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಗುರುವಾರ ರಾತ್ರಿ(ಇಂದು) 10 ಗಂಟೆಯವರೆಗೆ ಬಹಿರಂಗ ಪ್ರಚಾರಕ್ಕೆ ಅನುಮತಿ ಇದೆ. ಈ ಮೊದಲು ಶುಕ್ರವಾರ ಸಂಜೆ 5ಗಂಟೆಯ ತನಕ ಪ್ರಚಾರಕ್ಕೆ ಅನುಮತಿ ನೀಡಲಾಗಿತ್ತು.

ಮೇಲ್ವಿಚಾರಣೆ, ನಿರ್ದೇಶನ, ಚುನಾವಣೆಯ ನಿಯಂತ್ರಣಕ್ಕೆ ಅನುಮತಿ ನೀಡುವ ಸಂವಿಧಾನದ 324ನೇ ಆರ್ಟಿಕಲ್​ನ್ನು ಮೊದಲಬಾರಿಗೆ ಚುನಾವಣಾ ಪ್ರಚಾರವನ್ನು ನಿಯಂತ್ರಿಸಲು ಬಳಸಿಕೊಳ್ಳಲಾಗಿದೆ. ಈ ಮೊದಲು ಈ ಆರ್ಟಿಕಲ್​ನ್ನು ಚುನಾವಣೆ ರದ್ದು, ಮುಂದೂಡುವಿಕೆ ಅಥವಾ ಅಭ್ಯರ್ಥಿಯನ್ನು ದಂಡಿಸುವುದಕ್ಕಷ್ಟೇ ಬಳಸಲಾಗಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments