ಸಿಲಿಕಾನ್​ ಸಿಟಿಯಲ್ಲಿ ಇಂದೂ ಮಳೆಯಾಗುವ ಸಾಧ್ಯತೆ

0
189

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇಂದೂ ಸಹ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ. ನಿನ್ನೆ ಸಂಜೆಯಷ್ಟೇ ಬೆಂಗಳೂರಿನ ಕಬ್ಬನ್ ಪಾರ್ಕ್, ಯುಬಿ ಸಿಟಿ, ಮಲ್ಲೇಶ್ವರಂ, ಲಾಲ್ ಬಾಗ್ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿತ್ತು. ಇದರ ಬೆನ್ನಲ್ಲೇ ಇನ್ನೂ ಎರಡು ದಿನ ನಗರದಲ್ಲಿ ತುಂತುರು ಮಳೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎರಡು ಕಡೆ ಮರದ ಕೊಂಬೆಗಳು ಮುರಿದು ಬಿದ್ದಿವೆ.  ನಿಮ್ಹಾನ್ಸ್ ಬಳಿ ರಸ್ತೆಗೆ ಬಿದ್ದ ಮರದ ಕೊಂಬೆಯನ್ನು ಕೂಡಲೇ ಬಿಬಿಎಂಪಿ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ತೆರವುಗೊಳಿಸಿದ್ದಾರೆ. ರಾಜಾಜಿನಗರ ಎಂ ಇ ಪಾಲಿಟೆಕ್ನಿಕ್ ಕಾಲೇಜಿನ ಬಳಿ ಮರದ ಕೊಂಬೆ ರಸ್ತೆಗೆ ಬಿದ್ದಿತ್ತು, ಅದನ್ನೂ ಕೂಡಲೇ ತೆರವುಕೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

LEAVE A REPLY

Please enter your comment!
Please enter your name here