ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಇಂದು 45ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಬಾರಿ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳ ಜೊತೆ ಬರ್ತ್ಡೇ ಸೆಲೆಬ್ರೇಷನ್ ಮಾಡಿಕೊಳ್ಳುತ್ತಿಲ್ಲ. ನೀವೆಲ್ಲಾ ಸುರಕ್ಷಿತವಾಗಿದ್ರೆ ನನಗದೇ ಉಡುಗೊರೆ ಅಂತ ಅಭಿಮಾನಿಗಳಿಗೆ ಹೇಳಿದ್ದಾರೆ.
ಪ್ರತಿ ವರ್ಷದಂತೆ ಈ ಬಾರಿಯೂ ಪುನೀತ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಪ್ಲಾನ್ ಮಾಡಿದ್ದರು. ಈ ಬಾರಿ ಅಪ್ಪು ಬರ್ತ್ಡೇ ಆಚರಿಸಿಕೊಳ್ಳುತ್ತಿಲ್ಲ ಎಂಬ ಸುದ್ದಿ ಕೇಳಿ ಅಭಿಮಾನಿಗಳಿಗೆ ಕೊಂಚ ಬೇಸರವಾಗಿದೆ. ಹಾಗಾಗಿ ಅಪ್ಪು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲೇ ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಬಾರಿ ಬರ್ತ್ಡೇ ಸೆಲೆಬ್ರೇಷನ್ ಮಾಡಿಕೊಳ್ಳದೆ ಇದ್ದರೂ ಹುಟ್ಟುಹಬ್ಬದ ಸಂಭ್ರಮ ಹೆಚ್ಚಿಸಲು ‘ಯುವರತ್ನ‘ ಸಿನಿಮಾದ 2ನೇ ಡೈಲಾಗ್ ಟೀಸರ್ ಸೋಮವಾರ ರಾತ್ರಿಯೇ ರಿಲೀಸ್ ಮಾಡಲಾಗಿದೆ.
‘ಯುವರತ್ನ‘ನಿಗೆ 45ನೇ ಹುಟ್ಟುಹಬ್ಬದ ಸಂಭ್ರಮ
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on