ನವದೆಹಲಿ : ಇಂದು ಅಜಾತಶತ್ರು, ಕವಿ ಹೃದಯಿ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಹುಟ್ಟುಹಬ್ಬ. ಈ ಹಿನ್ನಲೆಯಲ್ಲಿ ದೆಹಲಿಯಲ್ಲಿರುವ ವಾಜಪೇಯಿ ಸ್ಮಾರಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಹಾಗೂ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿ, ಪುಷ್ಪಗಳ ಮೂಲಕ ನಮನ ಸಲ್ಲಿಸಿದ್ದಾರೆ.
ದೇಶದ ಪ್ರಜೆಗಳ ಹೃದಯದಲ್ಲಿರೋ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ. ಅವರಿಗೆ ಕೋಟಿ ಕೋಟಿ ನಮನ ಎಂದು ನರೇಂದ್ರ ಮೋದಿ ಟ್ಟಿಟ್ಟರ್ ವಿಡಿಯೋ ಹಂಚಿಕೊಂಡಿದ್ದಾರೆ.
देशवासियों के दिलों में बसे पूर्व प्रधानमंत्री भारत रत्न अटल बिहारी वाजपेयी जी को उनकी जन्म-जयंती पर कोटि-कोटि नमन। pic.twitter.com/9tCkmEUxnf
— Narendra Modi (@narendramodi) December 25, 2019