ಚಿಕ್ಕಬಳ್ಳಾಪುರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸುಲ್ತಾನಪೇಟೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಸುಲ್ತಾನ ಪೇಟೆ ಗ್ರಾಮದ ಮಾರಮ್ಮ- ಸಪ್ಪಲಮ್ಮ ದೇಗುಲದ ಅರ್ಚಕ ಕಿರುಕುಳವೇ ಸಾವಿಗೆ ಕಾರಣ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಡಿಯೋದಲ್ಲಿ ಬಡ್ಡಿ ದಂಧೆಕೋರರ ಹೆಸರು ಪ್ರಸ್ತಾಪ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.