ಬೆಂಗಳೂರು: ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನದ ಹಿನ್ನಲೆ ಪ್ರಾಧನಿ ನರೇಂದ್ರ ಮೋದಿ ಕರ್ನಾಟಕ ಸೇರಿ 6 ರಾಜ್ಯಗಳ ರೈತರ ಜೊತೆ ಸಂವಾದ ನಡೆಸಲಿದ್ದಾರೆ. ದೇಶದಾದ್ಯಂತ ಇಂದು ಕಿಸಾನ್ ಸಮ್ಮಾನ್ ದಿನಾಚರಣೆಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯವರು ವಿಡಿಯೋ ಕಾನ್ಪರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಕೃಷಿ ಹೋರಾಟದ ನಡುವೆ ದೇಶಾದ್ಯಂತ ಕಾರ್ಯಕ್ರಮ. 9 ಕೋಟಿ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆ ಹಣ ತಲಾ 2 ಸಾವಿರ ರೂ.ಜಮೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕೃಷಿ ತಿದ್ದುಪಡಿ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡುವ ಸಾಧ್ಯತೆ ಇದೆ.