Home ದೇಶ-ವಿದೇಶ ``ಮಹಿಳೆಯಾಗಿ ಇರುವುದೇ ಅಪರಾಧನಾ'' : ಪಶು ವೈದ್ಯೆ ಹತ್ಯೆ ವಿರುದ್ಧ ನಟಿಯರ ಆಕ್ರೋಶ

“ಮಹಿಳೆಯಾಗಿ ಇರುವುದೇ ಅಪರಾಧನಾ” : ಪಶು ವೈದ್ಯೆ ಹತ್ಯೆ ವಿರುದ್ಧ ನಟಿಯರ ಆಕ್ರೋಶ

ತೆಲಂಗಾಣ: ಪಶು ವೈದ್ಯೆ ಅತ್ಯಾಚಾರ , ಕೊಲೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿಬೀಳಿಸಿದೆ. ಹತ್ಯೆಯ ವಿರುದ್ಧ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗತ್ತಿದೆ .ಅಂತೆಯೇ ದಕ್ಷಿಣ ಭಾರತದ ಚಿತ್ರರಂಗದ ಕಲಾವಿದರು ಕೂಡ ಪಶು ವೈದ್ಯೆ ಹತ್ಯೆ ಖಂಡಿಸಿ ಆಕ್ರೋಶ ಹೊರಹಾಕಿದ್ದಾರೆ.

ಹತ್ಯೆ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ ಅನುಷ್ಕಾ, ಮುಗ್ದ ಯುವತಿ ಮೇಲೆ ಅತ್ಯಾಚಾರ ನೆಡೆಸಿ ಕೊಲ್ಲಲಾಗಿದೆ. ಇದು ಮನುಕುಲವೆ ತಲೆತಗ್ಗಿಸುವಂತಹ ಕೃತ್ಯ. ಆಕೆಯನ್ನು ಕೊಂದ ಪಾಪಿಗಳನ್ನು ಪ್ರಾಣಿಗಳಿಗೆ ಹೋಲಿಸಿದರೆ ಅವು ಕೂಡ ನಾಚಿಕೆ ಪಡುತ್ತವೆ. ಈ ಸಮಾಜದಲ್ಲಿ ಮಹಿಳೆಯಾಗಿ ಇರುವುದೇ ಅಪರಾಧನಾ?ಎಂದು ವಿಷಾದಿಸಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಸುರಕ್ಷತೆ ಎಲ್ಲಿದೆ? ಕೆಟ್ಟ ವಿಷಯಗಳು ಹಾಗೂ ಹಿಂಸಾಚಾರವನ್ನು ನಿರ್ಲಕ್ಷಿಸುವುದರಿಂದ ಪರಿಹಾರ ಸಿಗುವುದಿಲ್ಲ. ನೀವು ಸುರಕ್ಷತೆ ಇಲ್ಲವೆಂದೆಸಿದಲ್ಲಿ ಸಹಾಯಕ್ಕಾಗಿ ಸಂಪರ್ಕಿಸಿ ಎಂದು ತೆಲಂಗಾಣದ ಪೊಲೀಸ್​​ ಇಲಾಖೆಯ ಶೀಟೀಮ್ಸ್​ ನಂಬರ್​ಗಳನ್ನು ಶೇರ್ ಮಾಡಿದ್ದಾರೆ. 

ಪಶು ವೈದ್ಯೆಯನ್ನು ರೇಪ್ ಮಾಡಿ ಜೀವಂತವಾಗಿ ಸುಟ್ಟು ಹಾಕಿರುವುದನ್ನು ನೋಡಿ ನನ್ನ ಎದೆ ಹೊಡೆದುಹೋಯಿತು . ಈ ಸಮಯದಲ್ಲಿ ನನಗೆ ಮಾತೆ ಬರುತ್ತಿಲ್ಲ. ಎಲ್ಲಾ ಸಮಯದಲ್ಲೂ ಮಹಿಳೆಯರು ತಿರುಗಾಡುವ ಸಮಯ ದೇಶದಲ್ಲಿ ಯಾವಾಗ ಬರುತ್ತದೆ ಎಂದಿದ್ದಾರೆ . ಅಲ್ಲದೆ ಕ್ರೂರ ಸೈಕೋಪಾಥಿಸ್ ಗಳನ್ನು ಬೇಟೆಯಾಡಬೇಕು ಅಂತವರನ್ನು ಬೇಗ ಶಿಕ್ಷಿಸಬೇಕು .ಆಕೆಯ ಕುಟುಂಬಕ್ಕೆ ದೇವರು ದುಃಖ ಬರಿಸುವ ಶಕ್ತಿ ಕೊಡಲಿ ,ನನಗೆ ಕರ್ಮದಲ್ಲಿ ನಂಬಿಕೆ ಇದೆ ಎಂದು ಕೀರ್ತಿ ಸುರೇಶ್​ ಬರೆದುಕೊಂಡಿದ್ದಾರೆ. 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments