Home ರಾಜ್ಯ 26 ದಿನ ನಡುಗಡ್ಡೆಯಲ್ಲಿ ಸಿಲುಕಿದ್ದ 194 ಕುರಿಗಳ ರಕ್ಷಣೆ!

26 ದಿನ ನಡುಗಡ್ಡೆಯಲ್ಲಿ ಸಿಲುಕಿದ್ದ 194 ಕುರಿಗಳ ರಕ್ಷಣೆ!

ಯಾದಗಿರಿ: ‘ಕೃಷ್ಣ ನದಿ ಪ್ರವಾಹ ಸಂಪೂರ್ಣ ತಗ್ಗಿದ್ದ ಹಿನ್ನಲೆ ನದಿ ನಡುಗಡ್ಡೆಯಲ್ಲಿ ಸಿಲುಕಿದ್ದ ಕುರಿಗಳನ್ನ ತೆಪ್ಪದ ಮೂಲಕ ರಕ್ಷಣೆ ಮಾಡಲಾಗಿದೆ. ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಳಿ ಕೃಷ್ಣ ನದಿ ನಡುಗಡ್ಡೆಯಲ್ಲಿ 230 ಕುರಿಗಳು ಸಿಲುಕಿದ್ದವು. ಆದ್ರೆ ಇವತ್ತು ನದಿಯ ನೀರಿನ ಹರಿವು ಕಡಿಮೆಯಾದ ಹಿನ್ನಲೆ 194 ಕುರಿಗಳನ್ನ ರಕ್ಷಣೆ ಮಾಡಲಾಗಿದೆ. ಇನ್ನುಳಿದ 36 ಕುರಿಗಳು ನೀರಿನ ಪ್ರಮಾಣ ಹೆಚ್ಚಿದ್ದಾಗ ನೀರಿನಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗುತ್ತಿದೆ.

ಸುಮಾರು 26 ದಿನಗಳ ಬಳಿಕ 194 ಕುರಿಗಳು ಸುರಕ್ಷಿತವಾಗಿ ಮನೆ ಸೇರಿವೆ. ಕಳೆದ 26 ಹಿಂದೆ ನಾರಾಯಣಪುರ ಗ್ರಾಮದ ಕುರಿಗಾಯಿ ಟೋಪಣ್ಣ ಕುರಿ ಮೇಯಿಸಲು ಹೋದಾಗ ಕೃಷ್ಣ ನದಿಗೆ ಬಸವಸಾಗರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿರುವ ಹಿನ್ನಲೆ ನದಿಯ ನಡುಗಡ್ಡೆಯಲ್ಲಿ ಕುರಿಗಳ ಸಮೇತ ಕುರಿಗಾಯಿ ಸಿಲುಕಿದ್ದ. ಆದ್ರೆ ಕುರಿಗಾಯಿಯನ್ನ ಎನ್​ಡಿಆರ್​ಎಫ್ ತಂಡ ರಕ್ಷಣೆ ಮಾಡಿತ್ತು. ಇದೀಗ ಕುರಿಗಳನ್ನ ರಕ್ಷಣೆ ಮಾಡಲಾಗಿದೆ.

-ಅನಿಲ್‌ಸ್ವಾಮಿ

LEAVE A REPLY

Please enter your comment!
Please enter your name here

- Advertisment -

Most Popular

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ...

‘ಠಾಕ್ರೆ ಟ್ವೀಟ್ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ’

ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ...

Recent Comments