Homeರಾಜ್ಯ‘ಅತ್ಯಾಚಾರ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನೆ’

‘ಅತ್ಯಾಚಾರ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕದಿಂದ ಬೃಹತ್ ಪ್ರತಿಭಟನೆ’

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಕಾಂಗ್ರೆಸ್ ಕಣ್ಣಿಗೆ ಬಟ್ಟೆ ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಪ್ರಕರಣದ ವಿರುದ್ಧ ಬೃಹತ್  ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಮೀನಾಮೇಷ ಎಣಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನ ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಕಿಡಿಕಾರಿದರು. ಶೃಂಗೇರಿಯಲ್ಲಿ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡು ಬೆದರಿಸಿ  30ಕ್ಕೂ ಹೆಚ್ಚು ಜನ ಅತ್ಯಾಚಾರಗೈದಿದ್ದರು. ಪ್ರಕರಣ ದಾಖಲಿಸಿಕೊಂಡು 17 ಜನರ ಮೇಲೆ ಎಫ್.ಐ.ಆರ್. ದಾಖಲಿಸಿದ ಶೃಂಗೇರಿ ಪೊಲೀಸರು 8 ಜನರನ್ನ ಬಂಧಿಸಿದ್ದರು. ಕೂಡಲೇ  ಉಳಿದವರನ್ನೂ ಬಂಧಿಸುವಂತೆ ಆಗ್ರಹಿಸಿದ್ದಾರೆ.

ಸಚಿನ್ ಶೆಟ್ಟಿ ಚಿಕ್ಕಮಗಳೂರು

LEAVE A REPLY

Please enter your comment!
Please enter your name here

- Advertisment -

Most Popular

Recent Comments