Home ರಾಜ್ಯ ಪಾಲಿಕೆ ವೈದ್ಯಾಧಿಕಾರಿ ಮೇಲೆ ಹಲ್ಲೆ : ವ್ಯಾಪಕ ಖಂಡನೆ

ಪಾಲಿಕೆ ವೈದ್ಯಾಧಿಕಾರಿ ಮೇಲೆ ಹಲ್ಲೆ : ವ್ಯಾಪಕ ಖಂಡನೆ

ಹುಬ್ಬಳ್ಳಿ : ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಪ್ರಭು ಬಿರಾದಾರ ಅವರನ್ನು ದುರುದ್ದೇಶದಿಂದ ಲೈಂಗಿಕ ಕಿರುಕುಳ ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿ ನಗರದ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಸಿದ ‌ಕಾರ್ಯಕರರ್ತರು ಡಾ. ಪ್ರಭು ಬಿರಾದಾರ ವಿರುದ್ದ ವ್ಯವಸ್ಥಿತ ಸಂಚು ನಡೆಸಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದರು. ಲೈಂಗಿಕ ಕಿರುಕುಳದ ಬಗ್ಗೆ ಮಹಿಳೆ ಪೋಲಿಸರಿಗೆ ದೂರು ನೀಡಬೇಕಿತ್ತು. ಅದನ್ನು ಬಿಟ್ಟು ಕರ್ತವ್ಯ ನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯವಾಗಿದೆ. ಈ ಕುರಿತು ಸತ್ಯಾಸತ್ಯತೆ ಅವಲೋಕಿಸಿ ಕ್ರಮ ಕೈಗೊಳ್ಳಬೇಕು‌. ಕರ್ತವ್ಯ ನಿರತ ವೈದ್ಯಾಧಿಕಾರಿ ಮೇಲೆ ಹಲ್ಲೆ ನಡೆಸಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿ ಪಾಲಿಕೆ ಆಯುಕ್ತರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

ಅಪಮಾನದಿಂದ ಶೋಕ್ದಾರ್ ಮುಕ್ತ.. ನೋ ಮಿಸ್ಟೇಕ್..?!

ನೈಟ್ ಸಫಾರಿಯಿಂದ ಹೊಸ ವಿವಾದದಲ್ಲಿ ಸಿಲುಕಿಕೊಂಡಿದ್ದ ಸ್ಯಾಂಡಲ್​ವುಡ್​ನ ಶೋಕ್ದಾರ್, ಟಾಕ್ ಆಫ್ ದ ಟೌನ್ ಆಗಿದ್ರು. ಆದ್ರೀಗ ಅರಣ್ಯಾಧಿಕಾರಿಗಳು ಆ ಕೇಸ್​ನ ಟ್ರೇಸ್ ಮಾಡಿದ್ದಾರೆ. ಅವಮಾನ ಹಾಗೂ ಅಪಮಾನಗಳಿಂದ ಬಜಾರ್ ಹುಡ್ಗನಿಗೆ ಮುಕ್ತಿ...

ಡಿಕೆಶಿ ಗೂಂಡಾ ರಾಜಕಾರಣ ನಡೆಯುವುದಿಲ್ಲ : ಶೋಭಾ ಕರಂದ್ಲಾಜೆ

ಮೈಸೂರು :  ಶಿರಾ, ಆರ್ ಆರ್​ ನಗರ ವಿಧನಾಸಭಾ ಉಪ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ . ಕೆ ಶಿವಕುಮಾರ್​ ಅವರ ಗೂಂಡಾ ರಾಜಕಾರಣ  ನಡೆಯುವುದಿಲ್ಲ ಅಂತ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ...

ಕಾಡಾನೆ ದಾಳಿಗೆ ಸಕ್ರೆಬೈಲು ಬಿಡಾರದ ದೈತ್ಯ ಆನೆ `ರಂಗ’ ಸಾವು

ಶಿವಮೊಗ್ಗ :  ಕಾಡಾನೆ ದಾಳಿಯಿಂದ ಸಕ್ರೆಬೈಲು ಬಿಡಾರದ ಆನೆ ರಂಗ ಮೃತಪಟ್ಟಿದೆ. 35 ವರ್ಷದ ಆನೆ ರಂಗ ಸಕ್ರೆಬೈಲು ಬಿಡಾರದ ಪ್ರಮುಖ ಆಕರ್ಷಣೆಯಾಗಿತ್ತು. ಕಳೆದ ರಾತ್ರಿ ಬಿಡಾರಕ್ಕೆ ನುಗ್ಗಿದ ಕಾಡೆನೆಯೊಂದು ಏಕಾಏಕಿ ರಂಗನ ಮೇಲೆರಗಿದೆ....

ದೇವೇಂದ್ರ ಫಡ್ನವಿಸ್​​ಗೆ ಕೊರೋನಾ

ಮುಂಬೈ : ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರಿಗೆ ಕೊರೋನಾ ಸೋಂಕು ತಗುಲಿದೆ. ಫಡ್ನವೀಸ್ ಅವರು ಬಿಹಾರದ ಬಿಜೆಪಿ ಚುನಾವಣಾ ಪ್ರಚಾರ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಬಿಹಾರ ವಿಧಾನಸಭಾ...

Recent Comments