Home ರಾಜ್ಯ ಸಚಿವ ಸಿ.ಟಿ ರವಿ ವಿರುದ್ಧ ಪ್ರತಿಭಟನೆ!

ಸಚಿವ ಸಿ.ಟಿ ರವಿ ವಿರುದ್ಧ ಪ್ರತಿಭಟನೆ!

ಚಿಕ್ಕಮಗಳೂರು: ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಸಚಿವ ಸಿ.ಟಿ ರವಿ ಹೇಳಿಕೆ ಖಂಡಿಸಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಆಜಾದ್ ಪಾರ್ಕ್ ನಲ್ಲಿ ಕಾಂಗ್ರೆಸ್, ಕ.ರ.ವೇ, ಕನ್ನಡ ಸೇನೆ ಕಾರ್ಯಕರ್ತರು ಸಚಿವ ಸಿ.ಟಿ ರವಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ನಿನ್ನೆ ಸಚಿವ ಸಿ.ಟಿ ರವಿ ಪೀರನವಾಡಿ ಪ್ರಕರಣವನ್ನು ಕೆಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆಗೆ ಹೋಲಿಸಿ ಹೇಳಿಕೆ ನೀಡಿದ್ದರು.

ಸ್ವತಃ ಸಿಎಂ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಿದ್ರೂ ರಾತ್ರೋರಾತ್ರಿ ಪ್ರತಿಮೆ ನಿರ್ಮಾಣ ಮಾಡಿದರ ಉದ್ದೇಶ ಏನು? ಇದರ ಹಿಂದೆ ರಾಜಕೀಯ ಸಂಚು ಅಡಗಿದೆ ಎಂದು ಸಚಿವ ಸಿಟಿ ರವಿ ಆರೋಪಿಸಿದರು. ಆದರೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಹೋರಾಟದಲ್ಲಿ ಕನ್ನಡಿಗರು ಭಾಗಿಯಾಗಿದ್ದರು. ಇದು ಕನ್ನಡಿಗರ ಸ್ವಾಭಿಮಾನದ ಹೋರಾಟ, ಆದ್ರೂ ಸಿ.ಟಿ ರವಿ ಬಾಲಿಶ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಭಟನಾಕಾರರು ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಹೋರಾಟದಲ್ಲಿ ಭಾಗಿಯಾದ ಕನ್ನಡಿಗರ ಮೇಲಿನ ಕ್ರಿಮಿನಲ್ ಕೇಸ್ ರದ್ದು ಮಾಡುವಂತೆ ಆಗ್ರಹಿಸಿದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧವೂ ಪ್ರತಿಭಟನಾಕಾರರ ಆಕ್ರೋಶ ಹೊರಹಾಕಿದರು.

-ಸಚಿನ್ ಶೆಟ್ಟಿ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments