ಸಂಸದ ಶಿವರಾಮೇಗೌಡರ ವಿರುದ್ಧ ಪ್ರತಿಭಟನೆ

0
288

ಮಂಡ್ಯ: ಸುಮಲತಾ ಮಂಡ್ಯದ ಸೊಸೆ, ನಮ್ಮ ಮನೆ ಮಗಳು ಅಂತ ಮಂಡ್ಯದಲ್ಲಿ ಪ್ರತಿಭಟನಾಕಾರರು ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರ ಬಗ್ಗೆ ಸಂಸದ ಶಿವರಾಮೇಗೌಡ ಅವರ ಹೇಳಿಕೆಯನ್ನು ಖಂಡಿಸಿ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮದ್ದೂರು-ಮಳವಳ್ಳಿ ಹೆದ್ದಾರಿ ದೊಡ್ಡರಸಿನಕೆರೆ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದು, ವಾಹನ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಲಾಗಿದೆ.

ಸುಮಲತಾ ಅವರು ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆಂಬ ಕಾರಣಕ್ಕೆ ವೈಯಕ್ತಿಕ ಟೀಕೆ ಮಾಡಲಾಗುತ್ತಿದೆ. ಸುಮಲತಾ ಮಂಡ್ಯದ ಗೌಡ್ತಿ ಅಲ್ಲ. ದಾನವೀರ ಶೂರ ಕರ್ಣ ಅಂತಾ ಕರೆಸಿಕೊಂಡಿದ್ದ ಅಂಬರೀಷ್ ಏನು ಕೊಟ್ಟಿದ್ದರು..? ಅಂಬರೀಷ್ ಬದುಕಿದ್ದಾಗ ಏನು ಮಾಡಿದ್ದರು ಎಂದು ಪ್ರಶ್ನಿಸಿದ್ದ ಶಿವರಾಮೇಗೌಡರ ಅವಹೇಳನಕಾರಿ ಹೇಳಿಕೆ  ಖಂಡಿಸಿ ಮಂಡ್ಯದ ಜನ ಪ್ರತಿಭಟನೆ ನಡೆಸಿದ್ದಾರೆ. ಶಿವರಾಮೇಗೌಡ ಅವರು ಅಂಬರೀಶ್ ಬದುಕಿದ್ದಾಗ ಅವರ ಕಾಲಿಗೆ ಬೀಳುತ್ತಾರೆ. ಇದೀಗ ಅಂಬಿ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಇದಕ್ಕೆ ಚುನಾವಣೆಯಲ್ಲಿ ಮಂಡ್ಯ ಜನ್ರು ತಕ್ಕ ಪಾಠ ಕಲಿಸುತ್ತಾರೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here