Home ರಾಜ್ಯ ಗಾಂಧೀಜಿ ಫೋಟೋ ಹಿಡಿದು ಧರಣಿ ಕುಳಿತ ಪೊಲೀಸ್..!

ಗಾಂಧೀಜಿ ಫೋಟೋ ಹಿಡಿದು ಧರಣಿ ಕುಳಿತ ಪೊಲೀಸ್..!

ಹಾಸನ: ಪೊಲೀಸ್ ಪೇದೆಯೊಬ್ಬರು ತಹಶೀಲ್ದಾರ್​ರಿಂದ​ ತಮಗೆ ಅನ್ಯಾಯ ಆಗಿದೆಯೆಂದು ನಡುರಸ್ತೆಯಲ್ಲಿ ಮಹಾತ್ಮಾಗಾಂಧೀಜಿ ಪೋಟೋ ಹಿಡಿದು ಪ್ರತಿಭಟಿಸಿರುವ ಘಟನೆ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ನಡೆದಿದೆ. ದಯಾನಂದ್ ಪ್ರತಿಭಟನೆಗೆ ಕುಳಿತ ಸಕಲೇಶಪುರ ನಗರ ಪೊಲೀಸ್ ಠಾಣೆಯ  ಹೆಡ್ ಕಾನ್‍ಸ್ಟೇಬಲ್.

ರಾಷ್ಟ್ರೀಯ ಹೆದ್ದಾರಿ 75 ರ ಅಪೋಲೋ ಮೆಡಿಕಲ್‍ನ ಮುಂಭಾಗ ಕಾರ್ ನಿಲ್ಲಿಸಿ ಔಷಧಿ ತರಲು ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ತಹಶೀಲ್ದಾರ್ ಮಂಜುನಾಥ್ ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲುಗಡೆಯಾಗಿರುವುದನ್ನು ಗಮನಿಸಿದ್ದಾರೆ. ತಮ್ಮ ಕಾರು ಚಾಲಕನಿಗೆ ವಾಹನದ ಗಾಳಿ ಬಿಡಲು ಹೇಳಿದರು. ತಹಶೀಲ್ದಾರ್ ವಾಹನದ ಚಾಲಕ ಕಾರಿನ ನಾಲ್ಕು ಚಕ್ರದ ಗಾಳಿ ಬಿಟ್ಟಿದ್ದಾರೆ. ಈ ವೇಳೆ ಮೆಡಿಕಲ್ ಶಾಪ್‍ನಿಂದ ಪೇದೆ ಹೊರ ಬಂದಿದ್ದು, ತಹಶೀಲ್ದಾರ್ ಮಂಜುನಾಥ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ನಂತರ ಸ್ಥಳದಿಂದ ತಹಶೀಲ್ದಾರ್ ಬೇರೆಡೆಗೆ ತೆರಳಿದ್ದಾರೆ. ಈ ವೇಳೆ ಪೇದೆ ದಯಾನಂದ್ ಮಹಾತ್ಮ ಗಾಂಧೀಜಿಯವರ ಫೋಟೋ ಹಿಡಿದುಕೊಂಡು ಕಾರಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸಕಲೇಶಪುರದಲ್ಲಿ ಬಹಳ ಕಿರಿದಾದ ಜಾಗವಿದ್ದು ಕೇವಲ 2 ನಿಮಿಷದಲ್ಲಿ ಮೆಡಿಕಲ್ ಶಾಪ್ ನಿಂದ ಹೊರ ಬರುವಷ್ಟರಲ್ಲಿ ಕಾರಿನ ನಾಲ್ಕು ಚಕ್ರದ ಗಾಳಿಯನ್ನು ತೆಗೆದಿದ್ದು ಸರಿಯಲ್ಲ. ತಹಶೀಲ್ದಾರ್ ಬೇಕಿದಲ್ಲಿ ದಂಡ ಹಾಕಲಿ ಅಥವಾ ನೋಟಿಸ್ ನೀಡಲಿ, ನನಗೆ ನ್ಯಾಯ ಬೇಕು ಎಂದು ಆಗ್ರಹಿಸಿ ಧರಣಿ ಕುಳಿತು ಆಕ್ರೋಶ ಹೊರಹಾಕಿದ್ದಾರೆ.

ಇದರಿಂದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕೆಲವು ಸಮಯ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ರಸ್ತೆಯಲ್ಲಿ ಹೋಗುವವರು ಪೇದೆಯ ಈ ವರಸೆ ಕಂಡು ಏನೆಂದು ಅರ್ಥವಾಗದೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಕೆಲವರಿಗೆ ಪೇದೆಯ ಈ ವರಸೆ ಮೋಜು ತಂದರೆ ಪೋಲಿಸರು ಈತನ ಮನವೊಲಿಸಲು ಪರದಾಡಬೇಕಾಯಿತು. ಅಂತಿಮವಾಗಿ ನಗರ ಠಾಣೆ ಪಿಎಸ್‍ಐ ರಾಘವೇಂದ್ರ ಹಾಗೂ ಗ್ರಾಮಾಂತರ ಠಾಣೆಯ ಪಿಎಸ್‍ಐ ಚಂದ್ರಶೇಖರ್ ಬಂದು ಇತರ ಪೋಲಿಸರ ಸಹಾಯದಿಂದ ಪೇದೆಯನ್ನು ಎತ್ತಿಕೊಂಡು ನಗರ ಠಾಣೆಗೆ ಕರೆದೊಯ್ದರು. ಕಾರನ್ನು ಪಿಕಪ್ ಮೂಲಕ ತೆಗೆದುಕೊಂಡು ಹೋಗಲಾಯಿತು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments