ವಿಜಯಪುರ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಹಿನ್ನೆಲೆ ಮರಾಠಿ ಭಾಷಿಕರ ಪುಂಡಾಟ ವಿಚಾರಕ್ಕೆ ಸಂಭಂದಿಸಿದಂತೆ ವಿಜಯಪುರ ನಗರದಲ್ಲಿ ಕ.ರ.ವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಂ.ಇ.ಎಸ್ ಪುಂಡರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು. ವಿಜಯಪುರ ನಗರದ ಮಹಾತ್ಮಾ ಗಾಂಧಿ ವೃತ್ತ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಇನ್ನೂ ದಾಂಧಲೆ ನಡೆಸಿದ ಪುಂಡರ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕನ್ನಡಿಗರ ಮೇಲೆ ಚಪ್ಪಲಿ ಎಸೆದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು