Home uncategorized ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ ಪ್ರತಿಭಟನೆ..!

ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ ಪ್ರತಿಭಟನೆ..!

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವ್ಯಾಪ್ತಿಯಲ್ಲಿ ಬರುವ ಪಿರನವಾಡಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವಶಕ್ತಿ ಸಂಘಟನೆ ನಗರದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಬ್ರಿಟಿಷ್​ರ ವಿರುದ್ಧ ಸ್ವಾತಂತ್ರ್ಯದ ಕಿಚ್ಚನ್ನು ಹಚ್ಚಿದ ನಾಡ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಅವರ ಜನ್ಮದಿನದಂದೆ ಕೆಲ ಕಿಡಿಗೇಡಿಗಳು, ಅಧಕಾರಿಗಳೊಡನೆ ಸೇರಿ ತೆರವುಗೊಳಿಸಿದ್ದು ಖಂಡನೀಯ. ಇದು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳಿಗೆ ತೀವ್ರವಾಗಿ ನೋವುಂಟು ಮಾಡಿದ್ದು, ಕೂಡಲೇ ತೆರವುಗೊಳಿಸಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಬೇಕು‌. ತೆರವುಗೊಳಿಸಿದ ಪ್ರತಿಮೆಯನ್ನು ಪುನಃ ಅದೇ ಸ್ಥಳದಲ್ಲಿ ಮರು ಪ್ರತಿಷ್ಠಾಪನೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here

- Advertisment -

Most Popular

ನಿರಂತರ ಜ್ಯೋತಿ ಯೋಜನೆಯಲ್ಲಿ ಅವ್ಯವಹಾರ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸೂಕ್ತ ಕ್ರಮ ಜರುಗಿಸಿ ಎಂದು...

‘ಪಿಬಿ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಗಬ್ಬೂರು ಬೈಪಾಸ್ ಬಂದ್’

ಹುಬ್ಬಳ್ಳಿ: ಪುಣಾ-ಬೆಂಗಳೂರ ಬೈಪಾಸ್ ರಸ್ತೆಯು ಕಿರಿದಾಗಿದ್ದು, ಇದರಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ಕೂಡಲೇ ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿಪಡಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗಬ್ಬೂರು ಬೈಪಾಸ್ ಗೆ...

ಜ. 26 ರಂದು ಪರ್ಯಾಯ ರೈತ ಗಣರಾಜ್ಯೋತ್ಸವ ಪರೆಡ್: ಶಾಂತಕುಮಾರ

ಹುಬ್ಬಳ್ಳಿ : ದೆಹಲಿ ರೈತರ ಹೋರಾಟ ಬೆಂಬಲಿಸಿ ಜ. 26 ರಂದು ರೈತರ ಪರ್ಯಾಯ ಗಣರಾಜ್ಯೋತ್ಸವ ಪರೆಡ್ ಹಮ್ಮಿಕೊಳ್ಳಲಾಗಿದೆ. ಅಂದು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ , ಮೋಟಾರ್ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ...

‘ಠಾಕ್ರೆ ಟ್ವೀಟ್ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ’

ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ...

Recent Comments