Home ರಾಜ್ಯ ಪ್ರಧಾನಿ ಮೋದಿ ಅವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ಮಾಡೋಣ : ಶಾಸಕ ಮನಗೂಳಿ

ಪ್ರಧಾನಿ ಮೋದಿ ಅವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ಮಾಡೋಣ : ಶಾಸಕ ಮನಗೂಳಿ

ವಿಜಯಪುರ: ತಳವಾರ, ಪರಿವಾರ ಸಮುದಾಯಕ್ಕೆ ಎಸ್​ಟಿ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿರುವ ಶಾಸಕ ಎಂ.ಸಿ.‌ ಮನಗೂಳಿ ಮನೆಗೆ ತಳವಾರ ಮತ್ತು ಪರಿವಾರ ಸಮಾಜದ ಮುಖಂಡರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಳವಾರ ಮತ್ತು ಪರಿವಾರ ಎಸ್​ಟಿ ಮೀಸಲು ಪತ್ರಕ್ಕೆ ಹೋರಾಟಕ್ಕೆ ಶಾಸಕ ಮನಗೂಳಿ ಬೆಂಬಲಿಸಬೇಕು.‌ ಅಲ್ಲದೇ, ಸದನದಲ್ಲಿ ತಳವಾರ ಮತ್ತು ಪರಿವಾರಕ್ಕೆ ಎಸ್ ಟಿ ಪತ್ರ ನೀಡುವಂತೆ ಧ್ವನಿ ಎತ್ತುವಂತೆ ನಮ್ಮೊಂದಿಗೆ ಕೈ ಜೋಡಿಸಿ ನಮ್ಮ ಬೆಂಬಲಕ್ಕೆ ಸಹಕರಿಸುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ‌‌‌.ಸಿ. ಮನಗೂಳಿ, ನಿಮ್ಮ ಹೋರಾಟಕ್ಕೆ ಸದಾ ನನ್ನ ಬೆಂಬಲವಿದೆ. ನಮ್ಮ ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ದೇವೆಗೌಡ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿಯವರ ಮುಖಾಂತ ಸರ್ಕಾರದ ಮೇಲೆ ಒತ್ತಾಯಿಸುವು ದಾಗಿ ಹೇಳಿದರು, ಅಲ್ಲದೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಸ್​ಟಿ ಜಾತಿ ಪ್ರಮಾಣ ಪತ್ರ ನೀಡದೇ ಹೋದರೇ ಪ್ರಧಾನಿ ಮೋದಿ ಮನೆ ಎದುರು ಉಪವಾಸ ಪ್ರತಿಭಟನೆ ಮಾಡೋಣ ಎಂದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments