Home ರಾಜ್ಯ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ: ಬೆಂಗಳೂರಿನ ಡಿ.ಜೆ ಹಾಗೂ ಕೆ.ಜಿ ಹಳ್ಳಿಯಲ್ಲಿ ( ನಿನ್ನೆ ನಡೆದ ಗಲಭೆ ಸಂದರ್ಭದಲ್ಲಿ) ಮತ್ತು ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಗಳನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತರ ಪತ್ರಕರ್ತರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಪತ್ರಿಕಾ ಭವನದಿಂದ ತಹಶೀಲ್ದಾರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪತ್ರಕರ್ತರು ತಹಶೀಲ್ದಾರರ ‌ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಡಿ.ಜಿ ಹಳ್ಳಿಯಲ್ಲಿ ಹಾಗೂ ರಾಯಚೂರು ಜಿಲ್ಲೆ ಮಾನ್ವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಡೆದ ಹಲ್ಲೆಗಳು ಖಂಡಿನೀಯ. ಹಲ್ಲೆ ನಡೆಸಿದ ಗೂಂಡಾಗಳ ವಿರುದ್ದ ಕಠಿಣ ಕಾನೂನು ಕ್ರಮ ಜರಿಗಿಸಬೇಕು ಎಂದು ಆಗ್ರಹಿಸಲಾಯಿತು.

ಪದೇ ಪದೇ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಯುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೂಡಲೆ ರಾಜ್ಯ ಸರ್ಕಾರ ಇಂತಹ ಘಟನೆಗಳನ್ನ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ‌ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments