Home uncategorized ಪ್ರಮುಖ ಕೋರ್ಸ್‍ಗಳ ತರಗತಿಗಳ ಕಡಿತಕ್ಕೆ ವಿರೋಧಿಸಿ NSUI ಪ್ರತಿಭಟನೆ

ಪ್ರಮುಖ ಕೋರ್ಸ್‍ಗಳ ತರಗತಿಗಳ ಕಡಿತಕ್ಕೆ ವಿರೋಧಿಸಿ NSUI ಪ್ರತಿಭಟನೆ

ಶಿವಮೊಗ್ಗ: ಪ್ರಮುಖ ಕೋರ್ಸ್‍ಗಳ ತರಗತಿಗಳನ್ನು ಕಡಿತಗೊಳಿಸಿದ್ದು, ಹಿಂದಿನಂತೆಯೇ ತರಗತಿ ಮುಂದುವರೆಸಬೇಕೆಂದು ಒತ್ತಾಯಿಸಿ ಇಂದು ಎನ್.ಎಸ್.ಯು.ಐ. ಸಂಘಟನೆ ಸದಸ್ಯರು ಮತ್ತು ಮುಖಂಡರು  ಪ್ರತಿಭಟನೆ ನಡೆಸಿದ್ದಾರೆ. ಇಂದು ಸಹ್ಯಾದ್ರಿ ವಿಜ್ಞಾನ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡರು, ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಈ ವರ್ಷ ಸಿಬಿಜೆಡ್, ಪಿಸಿಎಂ, ಬಿಸಿಎ ಹಾಗೂ ಇನ್ನಿತರ ಪ್ರಮುಖ ಕೋರ್ಸ್‍ಗಳ ವಿಭಾಗಗಳನ್ನು 3 ರಿಂದ 1 ಸೆಕ್ಷನ್‍ಗೆ ಇಳಿಕೆ ಮಾಡಲಾಗಿದೆ. ಇದನ್ನು ಕೂಡಲೇ ಹಿಂದಿನಂತೆ 3 ಸೆಕ್ಷನ್‍ಗೆ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಸಹ್ಯಾದ್ರಿ ವಿಜ್ಞಾನ ಕಾಲೇಜಿಗೆ ಶಿವಮೊಗ್ಗ ಜಿಲ್ಲೆಯಷ್ಟೇ, ಸುತ್ತಮುತ್ತಲ ಜಿಲ್ಲೆಯ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ. ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ವಾಯತ್ತ ಕಾಲೇಜಾದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಣ ಶುಲ್ಕ ಕಡಿಮೆ ಇರುವುದರಿಂದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಈ ಬಾರಿ ಕಟ್ಟಡ ಕೊರತೆ ನೆಪವೊಡ್ಡಿ ಪ್ರಮುಖ ವಿಭಾಗಗಳ ತರಗತಿಗಳನ್ನು 3 ರಿಂದ 1ಕ್ಕೆ ಇಳಿಕೆ ಮಾಡಿರುವುದರಿಂದ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಇದರಿಂದ ಖಾಸಗಿ ಕಾಲೇಜುಗಳಿಗೆ ಪ್ರವೇಶ ಪಡೆಯಲು ದುಬಾರಿ ಶುಲ್ಕ ತೆರಬೇಕಾಗುತ್ತದೆ. ದುಬಾರಿ ಶುಲ್ಕ ಭರಿಸಲಾಗದ ಅನೇಕ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಬೇಕಾದ ಸ್ಥಿತಿ ಉಂಟಾಗಲಿದೆ ಎಂದು ದೂರಿದ್ದಾರೆ. ಈ ಬಗ್ಗೆ ಕುಲಪತಿಗಳು ಗಮನಹರಿಸಿ ಹಿಂದಿನಂತೆ, ಎಲ್ಲಾ ವಿಭಾಗಗಳಲ್ಲಿಯೂ 3 ಸೆಕ್ಷನ್ ತೆರೆಯುವಂತೆ ಮತ್ತು ಅಷ್ಟೇ ವಿದ್ಯಾರ್ಥಿಗಳಿಗೆ ಪ್ರವೇಶ ದೊರಕಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

 RAF ಘಟಕ ಶಂಕುಸ್ಥಾಪನೆ ವೇಳೆ ಕನ್ನಡಕ್ಕೆ ಒತ್ತು ನೀಡಿಲ್ಲ: ಹೆಚ್.ಡಿ.ಕೆ.

ಶಿವಮೊಗ್ಗ: ಶಿವಮೊಗ್ಗದ ಭದ್ರಾವತಿಯಲ್ಲಿ ಆರ್.ಎ.ಎಫ್. ಘಟಕ ಶಂಕುಸ್ಥಾಪನೆ ವಿಚಾರಕ್ಕೆ ಹೆಚ್.ಡಿ.ಕೆ. ಆಕ್ರೋಶ ವ್ಯಕಪಡಿಸಿದ್ದಾರೆ. ಶಂಕುಸ್ಥಾಪನೆ ವೇಳೆ ಫಲಕಗಳನ್ನು ಕನ್ನಡದಲ್ಲಿ ಹಾಕಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ.ಕೆ.,...

‘ಕೇಂದ್ರ ಗೃಹ ಸಚಿವರ ಆಗಮನಕ್ಕೆ ರೈತರ ವಿರೋಧ’

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಕ್ಕೆ ಅಮಿತ್ ಶಾ ಆಗಮನ ಹಿನ್ನಲೆಯಲ್ಲಿ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ. ಕೇಂದ್ರದ ಹೊಸ ಕೃಷಿ ಕಾಯ್ದೆಗೆ...

ಕರೋನಾ ಲಸಿಕೆ ಬಂದಿರುವುದು ಸಂತೋಷ : ಯು.ಟಿ.ಖಾದರ್

ಬೆಂಗಳೂರು: ಕೊರೋನಾ ಲಸಿಕೆ ವಿತರಣಾ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಖಾರವಾಗಿ ಟ್ವೀಟ್ ಮಾಡಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ ಮೊದಲು ಗ್ರೂಪ್ ಡಿ ನೌಕರರ ಮೇಲೆ ಯಾಕೆ ಪ್ರಯೋಗ ಮಾಡಬೇಕು....

‘ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆ’

ಕಲಬುರಗಿ: ಕಲಬುರಗಿಯಲ್ಲಿ ನಗರದ ಜಿಮ್ಸ್ ಕಾಲೇಜಿನಲ್ಲಿ ಸಂಸದ ಉಮೇಶ್ ಜಾಧವ್ ಕೊವಿಡ್ ವ್ಯಾಕ್ಸಿನ್ ಗೆ ಚಾಲನೆ ನೀಡಿದರು. ಜಿಲ್ಲೆಯ 8 ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್ ಗೆ ಚಾಲನೆ ನೀಡಲಾಯಿತು. ಒಂದು ಕೇಂದ್ರದಲ್ಲಿ 100...

Recent Comments