Home ರಾಜ್ಯ ತಹಸೀಲ್ದಾರ್ ಕಚೇರಿ ಎದುರು ಧರಣಿ - ಬೇಡಿಕೆ ಈಡೇರಿಕೆಗೆ ಆಗ್ರಹ

ತಹಸೀಲ್ದಾರ್ ಕಚೇರಿ ಎದುರು ಧರಣಿ – ಬೇಡಿಕೆ ಈಡೇರಿಕೆಗೆ ಆಗ್ರಹ

ಕೋಲಾರ: ಜಿಲ್ಲೆಯ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐ(ಎಂ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ತಹಸೀಲ್ದಾರ್ ಕಚೇರಿ ಎದುರು ಇವತ್ತು ಧರಣಿ ನಡೆಸಿದ ಸಿಪಿಐ(ಎಂ) ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರಗಳನ್ನ ಕೂಗಿದ್ರು. ಆತ್ಮನಿರ್ಭರ್ ಅಭಿಯಾನದಡಿ ಕೇಂದ್ರ ಸರ್ಕಾರದ ಸ್ವತ್ತುಗಳನ್ನ ಮಾರಾಟ ಮಾಡಲಾಗುತ್ತಿದೆ. ವಿದೇಶಿ ಖಾಸಗಿ ಬಂಡವಾಳಕ್ಕೆ ಸ್ವಯಂ ಆಡಿಯಾಳುತನಾಗಿದೆ ಅಂತ ಆರೋಪಿಸಿದ್ರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಎಪಿಎಂಸಿ ಕಾಯ್ದೆ, ಕೈಗಾರಿಕಾ ವಾಣಿಜ್ಯ ಕಾಯ್ದೆ, ಗುತ್ತಿಗೆ ಕಾರ್ಮಿಕರ ನಿಯಂತ್ರಣ ಕಾಯ್ದೆಗಳ ಜಾರಿಯಿಂದ ರೈತರಿಗೆ ಹಾಗೂ ಕಾರ್ಮಿಕರಿಗೆ ಅನ್ಯಾಯವಾಗಲಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾಯ್ದೆಗಳನ್ನ ವಾಪಸ್ಸು ಪಡೆಯಬೇಕು ಅಂತಾ ಒತ್ತಾಯಿಸಿದ್ರು. ಸರ್ಕಾರಗಳ ಧೋರಣೆಗಳು ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ರು.

-ಆರ್.ಶ್ರೀನಿವಾಸಮೂರ್ತಿ

LEAVE A REPLY

Please enter your comment!
Please enter your name here

- Advertisment -

Most Popular

‘ನಾನೇ ಸಭಾಪತಿ ಎಂದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ’

ಹುಬ್ಬಳ್ಳಿ: ಜೆಡಿಎಸ್ ನಿಂದ ನಾನೇ ಸಭಾಪತಿ ಅಭ್ಯರ್ಥಿ. ಬಿಜೆಪಿ ಉಪಸಭಾಪತಿಗೆ ಸ್ಪರ್ದೆ ಮಾಡಿದ್ರೆ ನಾನೇ ಸಭಾಪತಿ ಆಗುವೆ ಎಂದು ವಿಧಾನ ಪರಿಷತ್  ಸದಸ್ಯ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕೆಎಲ್ ಇ ಸಂಸ್ಥೆಗೆ ನೀಡಿದ ಭೂಮಿ ಮರಳಿ ಪಡೆಯುಲ್ಲ: ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ: ಮೂರು ಸಾವಿರಮಠದ ಆಸ್ತಿ ವಿವಾದ ಕುರಿತಂತೆ ಉನ್ನತ ಸಮಿತಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ದಿಂಗಾಲೇಶ್ವರ ಶ್ರೀಗಳ ವಿರುದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು, ನಾನು ಮಠದ...

ಪಂಜರದ ಗಿಣಿಗೆ ಇಂದು ಬಿಡುಗಡೆ ಭಾಗ್ಯ..!

ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ನಟಿ ರಾಗಿಣಿ ಅರೆಸ್ಟ್ ಆಗಿದ್ದರು, ಆದರೆ ಬೆಲ್ ಸಿಕ್ಕೂ ನಾಲ್ಕು ದಿನ ಆದರೂ ಇಂದು ಸಂಜೆ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಿಂದ ಸಂಜೆ ಬಿಡುಗಡೆಯಾಗಲಿದ್ದಾರೆ. ನಟಿ...

ಯಾವ ಸರ್ಕಾರವೂ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡಲ್ಲ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಕೃಷಿ ಕಾಯ್ದೆ ಪ್ರಯೋಗ ಆಗಲಿ. ಒಂದೆರೆಡು ವರ್ಷ ಪ್ರಯೋಗ ಆಗಲಿ. ಆಗ ರೈತರಿಗೆ ತೊಂದರೆಯಾದರೆ ವಾಪಸ್ ಪಡೆಯೋಕೆ ತಯರಾಗುತ್ತಾರೆ. ಯಾವ ಸರ್ಕಾವೂ ರೈತರಿಗೆ ತೊಂದರೆ ನೀಡುವ ಕೆಲಸ ಮಾಡಲ್ಲ ಎಂದು ಬೃಹತ್ ಕೈಗಾರಿಕೆ...

Recent Comments