ಬೆಂಗಳೂರು: ಮಾಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಟ್ವೀಟ್ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಮೈಸೂರು ಬ್ಯಾಂಕ್ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ನಡೆಸುತ್ತಿವೆ. ಉದ್ದವ್ ಠಾಕ್ರೆ ಭೂತದಹನ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಸಾ.ರಾ.ಗೋವಿಂದ್, ಶಿವರಾಮೇಗೌಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.