ಬೆಂಗಳೂರು: ಕೃಷಿ ವಿರೋಧಿ ಕಾಯ್ದೆಯ ಪ್ರತಿಭಟನೆ ಕಾವು ಕ್ಷಣ ಕ್ಷಣ್ಣಕ್ಕೂ ಹೆಚ್ಚಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಬಿಸಿ ಹೆಚ್ಚುತ್ತಿದೆ.
ಮೆಜೆಸ್ಟಿಕ್ ನಿಂದ ಫ್ರೀಡಂ ಪಾರ್ಕ್ ನತ್ತ ಕಾಂಗ್ರೆಸ್ ನಾಯಕರ ಜಾಥಾ ಹೊರಟಿದೆ. ರಾಜ್ಯದ ಎಲ್ಲ ಜಿಲ್ಲೆಗಳ ರೈತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ಧ ರೈತರ ಆಕ್ರೋಶ ಹೆಚ್ಚುತ್ತಿದೆ. ಫ್ಲೈ ಓವರ್ ಮೇಲೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಸಜ್ಜಾಗಿದ್ದಾರೆ.
ಪ್ರತಿಭಟನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ. ಪ್ರೀಡಂ ಪಾರ್ಕ ತಲುಪಿದ ಪ್ರತಿಭಟನೆ. ಅನ್ನದಾತರ ಜೊತೆ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನೆ. ಪ್ರೀಡಂ ಪಾರ್ಕ್ ನಲ್ಲಿ ಬೃಹತ್ ಸಮಾವೇಶ ಹಮ್ಮಿಕೋಳ್ಳಲಾಗಿದೆ. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ಸಮಾವೇಶ ಬಳಿಕ ರಾಜಭವನ ಮುತ್ತಿಗೆ ನಿರ್ಧಾರ ಕೈಗೊಳ್ಳಲಾಗಿದೆ.