ಬೆಂಗಳೂರು: ಕಳೆದ ಮೂರು ದಿನಗಳಿಂದ ಸಾರಿಗೆ ಸಿಬ್ಬಂಧಿಗಳು ಹಲವು ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.
ಇಂದು ಸಿಎಂ ಬಿಎಸ್ ಯಡಿಯೂರಪ್ಪ ಇನ್ನೂ ಸಾರಿಗೆ ಸಿಬ್ಬಂಧಿಗಳು ಮುಷ್ಕರ ಮುಂದುವರೆಸಿದರೆ ಸರಿಯಾದ ಕ್ರಮ ಕೈಗೊಳ್ಳುವ ಕುರಿತು ಹಾಗೂ ಮುಂದೆ ಎದುರಾಗುವ ಪರಿಣಾಮಗಳ ಕುರಿತು ಸಾರಿಗೆ ಸಚಿವ ಲಕ್ಷ್ಮಣ ಸವದಿ, ಡಿಸಿಎಂ ಕಾರಜೋಳ, ಡಿಸಿಎಂ ಅಶ್ವತ್ ನಾರಾಯಣ, ಕಾನೂನು ಸಚಿವ ಮಾಧುಸ್ವಾಮಿ, ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಅನೇಕ ಹಿರಿಯ ಸಚಿವರು ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.