ವಿಜಯಪುರ : ನಾಳೆ ದ್ವಿತಿಯ ಪಿಯುಸಿಯ ಇಂಗ್ಲೀಷ್ ವಿಷಯದ ವಾರ್ಷಿಕ ಪರೀಕ್ಷೆಯು ನಡೆಯುವ ಹಿನ್ನಲೆ ವಿಜಯಪುರ ಜಿಲ್ಲಾಡಳಿತ ಸರ್ವ ಸಿದ್ದತೆ ನಡೆಸಿಕೊಂಡಿದೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 41 ಪರೀಕ್ಷಾ ಕೇಂದ್ರಗಳಿದ್ದು, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು. ಇನ್ನೂ ಪರೀಕ್ಷಾ ಕೇಂದ್ರದ ಸುತ್ತ ಮುತ್ತಲು 200 ಮೀಟರ್ ಅಂತರದಲ್ಲಿ 144 ಕಲಂ ಜಾರಿ ಮಾಡಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಝರಾಕ್ಸ್, ಸೈಬರ್ ಕೆಫೆ, ಕೋಚಿಂಗ್ ಕ್ಲಾಸ್ಗಳನ್ನು ಬಂದು ಮಾಡುವಂತೆ ಜಿಲ್ಲಾಡಳಿತ ಸೂಚಿಸಿದೆ. ಕೋವಿಡ್-19 ಕೊರೋನಾ ವೈರಸ್ ಹರಡಿರುವ ಪ್ರಯುಕ್ತ ಪರೀಕ್ಷೆಗೆ ಬರುವ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ತಮಗೆ ಕುಡಿಯಲು ನೀರಿನ ಬಾಟಲ್, ಎರಡು ಪೆನ್ನುಗಳು ತೆಗೆದುಕೊಂಡು ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನರ್ನಿಂದ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆ ಮಾಡಿ ಸಾಮಾಜಿಕ ಅಂತರವನ್ನು ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಮಾಡಲು ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಗ್ಗೆ 8 ಗಂಟೆಗೆ ಹಾಜರಿರಲು ತಿಳಿಸಿದೆ. ಯಾವುದೇ ಕಾರಣಕ್ಕೂ ನಿಗದಿತ ಸಮಯವನ್ನು ಮೀರಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಇನ್ನೂ ಕಂಟೆನ್ಮೇಂಟ್ ವಲಯದಿಂದ ಬಂದಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳಲಾಗಿದ್ದು, ಜಿಲ್ಲೆಗೆ ಹೊರ ರಾಜ್ಯಗಳಿಂದ 04 ವಿದ್ಯಾರ್ಥಿಗಳು (ಮುಂಬೈಠಾಣೆ, ಪುಣೆ, ಸೊಲ್ಲಾಪೂರ) ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 917 ಜನ ವಿದ್ಯಾರ್ಥಿಗಳು ಈ ಜಿಲ್ಲೆಯಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 23556 ವಿದ್ಯಾರ್ಥಿಗಳು ನಾಳೆ ಪರಿಕ್ಷೆ ಬರೆಯಲಿದ್ದಾರೆ. ಇನ್ನೂ ಈಗಾಗಲೇ ಜಿಲ್ಲೆಯ ಎಲ್ಲ ಪರಿಕ್ಷಾ ಕೇಂದ್ರಗಳಿಗೆ ಸೆನಿಟೈಜರ್ ಮಾಡಿ ಸ್ವಚ್ಚ ಗೊಳಿಸಲಾಗಿದ್ದು, ಸೋಷಿಯಲ್ ಡಿಸ್ಟನ್ಸ ಮೂಲಕ ನಾಳೆ ಪರಿಕ್ಷೆ ನಡೆಸುವರು…
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on