ಬೆಂಗಳೂರು: ಸಾರ್ವಜನಿಕರ ಹಿತ ದೃಷ್ಟಿಯಿಂದ ಇಂದು ಮಧ್ಯಾಹ್ನ 12 ರಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಸಾರ್ವಜನಿಕರಲ್ಲಿ ಮಾಡಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಲ್ಲರಿಗೂ ಹೊಸ ವರ್ಷದ ಶುಭ ಕೋರಿ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಜಯಸಾಧಿಸಿದ್ದಾರೆ. 5728 ಗ್ರಾಮ ಪಂಚಾಯತಿಗಳ ಪೈಕಿ 3800 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಶೇಕಡ 60 ರಷ್ಟು ಗ್ರಾಮ ಪಂಚಾಯತಿಗಳಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.