ಹುಬ್ಬಳ್ಳಿ: ಲಾಕ್ಡೌನ್ ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ ದ್ವೀತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜೂನ್ 18ರಂದು ದಿನಾಂಕ ನಿಗದಿಪಡಿಸಿದ್ದು, ಧಾರವಾಡ ಜಿಲ್ಲೆಯಲ್ಲಿ 38 ಪರೀಕ್ಷಾ ಕೇಂದ್ರಗಳಲ್ಲಿ, 21,294 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಧಾರವಾಡ ಜಿಲ್ಲೆ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಈಗಾಗಲೇ 38 ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸರ್ ಸಿಂಪಡಣೆ ಮೂಲಕ ಸಿದ್ದಪಡಿಸಲಾಗಿದ್ದು, ಅಲ್ಲದೆ ಜಿಲ್ಲೆಯ 3000 ವಿದ್ಯಾರ್ಥಿಗಳು ತಾವು ಇರುವ ಸ್ಥಳದಲ್ಲಿಯೇ ಪರೀಕ್ಷೆ ಬರೆಯಲು ಸಿದ್ದರಾಗಿದ್ದು, ಹಳ್ಳಿಗಳಿಂದ ಬರುವ ಮಕ್ಕಳಿಗೆ ಸಾರಿಗೆ ಸಂಸ್ಥೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದೆ. ಇನ್ನೂ ಹೊರ ಜಿಲ್ಲೆಯ 224 ವಿದ್ಯಾರ್ಥಿಗಳು, ಮಹಾರಾಷ್ಟ್ರ 2, ಗೋವಾ 1, ತಮಿಳುನಾಡಿನ ಒಬ್ಬ ವಿದ್ಯಾರ್ಥಿ ಧಾರವಾಡ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.