ಪುಟ್ಟ ಅಭಿಮಾನಿಯ ಆಸ್ಪತ್ರೆ ವೆಚ್ಚ ಭರಿಸಿ ಮಾನವೀಯತೆ ಮೆರೆದ ಪುನೀತ್!

0
306

ಪವರ್ ಸ್ಟಾರ್ ಪುನೀತ್ ರಾಜ್​​ ಕುಮಾರ್​ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಿದ್ದಾರೆ. ಅಲ್ಲದೆ ಅನಾರೋಗ್ಯದಿಂದ ಬಳಲುತ್ತಿರುವ ಆತನ ಆಸ್ಪತ್ರೆ ವೆಚ್ಚವನ್ನು ಭರಿಸಿ ಮಾನವೀಯತೆ ಮೆರೆದಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಇಂದಿರಾ ನಗರ ನಿವಾಸಿ ಹನುಮಂತ ಮತ್ತು ರೇಖಾ ದಂಪತಿ ಹಿರಿಯ ಪುತ್ರ ಆದರ್ಶ್​ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು, ಆತನಿಗೆ ಪುನೀತ್ ರಾಜ್​​ಕುಮಾರ್ ಅಂದ್ರೆ ತುಂಬಾ ಇಷ್ಟ. ಪುನೀತ್ ಅವರನ್ನು ನೋಡ್ಬೇಕು ಅಂತ ತುಂಬಾ ಆಸೆ ಇಟ್ಟುಕೊಂಡಿದ್ದ. ಈ ಬಗ್ಗೆ ತಿಳಿದ ಪುನೀತ್ ತಮ್ಮ ಮನೆಗೆ ಆತನನ್ನು ಕರೆಸಿಕೊಂಡು ಪ್ರೀತಿಯಿಂದ ಮಾತನಾಡಿದ್ದಾರೆ. ಕೆಲ ಹೊತ್ತು ಆತನೊಡನೆ ಕಾಲ ಕಳೆದಿದ್ದಲ್ಲದೆ ಆತನ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಭರಿಸಿದ್ದಾರೆ. ಈ ಮೂಲಕ ಮತ್ತೊಮ್ಮೆ ಆದರ್ಶ ಮೆರೆದಿದ್ದಾರೆ.

LEAVE A REPLY

Please enter your comment!
Please enter your name here