ಆಂಧ್ರ ಸಿಎಂ ಪ್ರತಿಭಟನೆಯಲ್ಲಿ ರಾಹುಲ್​ಗಾಂಧಿ ಭಾಗಿ

0
223

ನವದೆಹಲಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರೂ ಆಗಿರುವ ಚಂದ್ರಬಾಬು ನಾಯ್ಡು ಆಂಧ್ರಪ್ರದೇಶ ಭವನದಲ್ಲಿ ‘ಧರ್ಮ ಪೋರಾಟ ದೀಕ್ಷ’ (ನ್ಯಾಯಕ್ಕಾಗಿ ಹೋರಾಟ) ನಡೆಸುತ್ತಿದ್ದಾರೆ. ತೆಲಂಗಾಣ ರಾಜ್ಯ ರೂಪಿಸುವ ಸಂದರ್ಭ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರತಿಭಟನೆ ಆರಂಭಿಸುವ ಮುನ್ನ ಸಿಎಂ ಚಂದ್ರಬಾಬು ನಾಯ್ಡು ಅವರು ಮಹಾತ್ಮಗಾಂಧಿ ಪ್ರತಿಮೆಗೆ ನಮನ ಸಲ್ಲಿಸಿದ್ದು, ಅಂಬೇಡ್ಕರ್​ ಪ್ರತಿಮೆಗೂ ಗೌರವ ಸಲ್ಲಿಸಿದ್ದಾರೆ. ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್​, ಟಿಡಿಪಿ ಸಂಸದರೂ, ಶಾಸಕರೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here