Home ಸಿನಿ ಪವರ್ ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ಇನ್ನಿಲ್ಲ..!

ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ಇನ್ನಿಲ್ಲ..!

ಬೆಂಗಳೂರು : ಕನ್ನಡದ ಹಾಸ್ಯ ಕಲಾವಿದರಾಗಿದ್ದ ರಾಜ ಗೋಪಾಲ್ ನಿನ್ನೆ ರಾತ್ರಿ 1 ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದಿದ್ದಾರೆ. ಅಸ್ತಮ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ 69 ವರ್ಷ ವಯಸ್ಸಾಗಿತ್ತು.
ರಾಜ್ ಗೊಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಿಡಿಯೆ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ದ ಇವರಿಗೆ ಮೂರು ಜನ ಹೆಣ್ಣುಮಕ್ಕಳು.
ಕನ್ನಡ ತಮಿಳು ಸೇರಿದಂತೆ 650 ಕ್ಕು ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದ ಇವರು ಫೇಮಸ್ ಅಕ್ರೇಸ್ಟ್ರಾಗಳಲ್ಲಿ ಮಿಮಿಕ್ರಿ ಮಾಡಿ ಹೆಸರು ಗಳಿಸಿದ್ದರು.
ವಿಷ್ಣುವರ್ಧನ್, ಅಂಬರೀಶ್, ಪ್ರಭಾಕರ್ ಹೀಗೆ ಕನ್ನಡದ ದೊಡ್ಡ ನಟರ ಜೊತೆ ಅಭಿನಯಿಸಿದ್ದ ಇವರು ಸಾಯಿ ಪ್ರಕಾಶ್ ನಿರ್ದೇಶನದ ಸಿನಿಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ರು. ಕೆಲ ವರ್ಷಗಳ ಹಿಂದಿನಿಂದ ಸಿನಿಮಾ ಅವಕಾಶ ಇಲ್ಲದೆ ಜೀವನ ನಿರ್ವಹಣೆಗೂ ಕಷ್ಟ ಪಡುತ್ತಿದ್ರು ಎನ್ನಲಾಗಿದೆ.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments