Home ದೇಶ-ವಿದೇಶ ರಾಜೀವ್ ಗಾಂಧಿ ಹಂತಕಿ ಪೆರೋಲ್ ಮೇಲೆ ಬಿಡುಗಡೆ..!

ರಾಜೀವ್ ಗಾಂಧಿ ಹಂತಕಿ ಪೆರೋಲ್ ಮೇಲೆ ಬಿಡುಗಡೆ..!

ಚೆನ್ನೈ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 28 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸ್ತಿರೋ ನಳಿನಿ ಶ್ರೀಹರನ್​ಗೆ ಮದ್ರಾಸ್ ಹೈಕೋರ್ಟ್ ಪೆರೋಲ್ ನೀಡಿದೆ.
ತಮಿಳುನಾಡಿನ ಮೂಲದವರಾದ ನಳಿನಿ ಕಳೆದ 28 ವರ್ಷಗಳಿಂದ ವೆಲ್ಲೂರು ಜೈಲಿನಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದು, ಮಗಳ ಮದುವೆಯ ಹಿನ್ನೆಲೆಯಲ್ಲಿ 30 ದಿನಗಳ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ.
ಜೈಲಿನಲ್ಲಿರುವಾಗಲೆ ಹೆಣ್ಣು ಮಗಳಿಗೆ ನಳಿನಿ ಜನ್ಮ ನೀಡಿದ್ದರು, ಈಗ ಲಂಡನ್​ನಲ್ಲಿ ಮಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಇದೀಗ ಮದುವೆ  ನಿಶ್ಚಯವಾಗಿರುವ ಹಿನ್ನಲೆ ಒಂದು ತಿಂಗಳ ಕಾಲ ಪೆರೋಲ್ ಮೇಲೆ ವೆಲ್ಲೂರು ಜೈಲಿನಿಂದ ಬಿಡುಗಡೆ ಮಾಡಲಾಗುತ್ತಿದೆ.  ಈ ಹಿಂದೆ ತನ್ನ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಕೆಗೆ 2016 ರಲ್ಲಿ 12 ಗಂಟೆಗಳ ಪೆರೋಲ್ ನೀಡಲಾಗಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments