Home ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಲೆಕ್ಕದಲ್ಲಿ 34 ಕ್ಕೂ ಹೆಚ್ಚು ಜಿಲ್ಲೆಗಳು!

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಲೆಕ್ಕದಲ್ಲಿ 34 ಕ್ಕೂ ಹೆಚ್ಚು ಜಿಲ್ಲೆಗಳು!

ಯಾದಗಿರಿ: ರಾಜ್ಯದಲ್ಲಿ ಒಟ್ಟು 30 ಜಿಲ್ಲೆ ಆದರೆ ರಾಜ್ಯದ 33 ಜಿಲ್ಲೆಗಳಲ್ಲಿ ಪ್ರವಾಸ ಮುಗಿಸಿಕೊಂಡು, 34 ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ ಅಂತಾ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ.

ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಇಂದು ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್ 33 ಜಿಲ್ಲೆಗಳ ಪ್ರವಾಸ ಮುಗಿಸಿಕೊಂಡು 34 ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ. ಇನ್ನೂ ಮೂರು ಜಿಲ್ಲೆಗಳು ಬಾಕಿ ಇವೆ ಅಂತಾ ಹೇಳಿ ಎಡವಟ್ಟು ಮಾಡಿಕೊಂಡಿದ್ದಾರೆ. ಇನ್ನೂ ಕಟೀಲ್ ಹೇಳಿಕೆಗೆ ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಿಗೆ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬುದು ಗೊತ್ತಿಲ್ವ ಅಂತಾ ಕಾಲೆಳೆದಿದ್ದು, ಕಟೀಲ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಹ ಸಖತ್ ಟ್ರೋಲ್ ಆಗಿದೆ.

– ಅನಿಲ್‌ಸ್ವಾಮಿ 

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments