Home ಪವರ್ ಪಾಲಿಟಿಕ್ಸ್ ಜೆಡಿಎಸ್‌ ಶಾಸಕ ಎ.ಮಂಜು ಬೆಂಬಲಿಗರ ಬರ್ತ್ ಡೇ ಪಾರ್ಟಿಯಲ್ಲಿ ಮೋಜು-ಮಸ್ತಿ

ಜೆಡಿಎಸ್‌ ಶಾಸಕ ಎ.ಮಂಜು ಬೆಂಬಲಿಗರ ಬರ್ತ್ ಡೇ ಪಾರ್ಟಿಯಲ್ಲಿ ಮೋಜು-ಮಸ್ತಿ

ರಾಮನಗರ: ಕೊರೋನಾ ಮಹಾಮಾರಿ ಅಬ್ಬರದ ನಡುವೆ ಮಾಗಡಿ ಜೆಡಿಎಸ್ ಶಾಸಕ ಎ.ಮಂಜು ಅಂಧ ದರ್ಬಾರ್. ಕೋವಿಡ್ ನಿಯಮ ಉಲ್ಲಂಘಿಸಿ ಬಿಡದಿಯಲ್ಲಿ ಬೆಂಬಲಿಗನ ಬರ್ತ್ ಡೇ ಪಾರ್ಟಿಯಲ್ಲಿ ಮೋಜುಮಸ್ತಿ

ಬಿಡದಿಯ ಹೊಸದೊಡ್ಡಿ ಗ್ರಾಮದಲ್ಲಿ ನಡೆದ  ಬರ್ತ್ ಡೆ ಪಾರ್ಟಿಯಲ್ಲಿ  ಶಾಸಕರ ಬೆಂಬಲಿಗರಾದ  ಶೇಷಪ್ಪ ಎಂಬುವರ 60 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಎ.ಮಂಜುನಾಥ್ ಭಾಗಿಯಾಗಿದ್ರು. ಜಿಲ್ಲೆಯಲ್ಲಿ ಕರೋನ ದಿನದಿಂದ ದಿನಕ್ಕೆ ಹೆಚ್ಚಾಗ್ತನೆ ಇದ್ರೂ ಕೂಡ ಯಾಕೆ ಈ ರೀತಿ ನಿರ್ಲಕ್ಷ್ಯ, ಬರ್ತ್ ಡೇ ಪಾರ್ಟಿಯಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲದೇ ಮಾಸ್ಕ್ ಧರಿಸದೇ ಬೇರೆ ಬೇರೆ ಜಿಲ್ಲೆಯಿಂದ  ಅನೇಕರು ಪಾರ್ಟಿಯಲ್ಲಿ ಭಾಗಿಯಾಗಿದ್ರು.  ಜನಸಾಮಾನ್ಯರಿಗೆ ಅರಿವು ಮೂಡಿಸಿ ಜನರಿಗೆ ತಿಳಿಹೇಳಬೇಕಿದ್ದ ಶಾಸಕರೇ ಈ ರೀತಿ ಮಾಡಿದ್ರೆ ಹೇಗೆ ಎಂದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗ್ತಿದೆ. ಇನ್ನೂ ಕಳೆದ ಒಂದು ವಾರದ ಹಿಂದೆ ಶಾಸಕರ ಆಪ್ತ ಕಾರ್ಯದರ್ಶಿಗೆ ಕರೋನ ಪಾಸಿಟಿವ್ ಬಂದಿತ್ತು, ಆ ಹಿನ್ನಲೆಯಲ್ಲಿ ಶಾಸಕರು ಕೂಡ ಹೋಂ ಕ್ವಾರಂಟೈನ್ ನಲ್ಲಿ ಇದ್ರೂ, ಎರಡು ದಿನಗಳ ಹಿಂದೆ ಶಾಸಕರ ವರದಿ ನೆಗೆಟಿವ್ ಬಂದಿದೆ. ಇಷ್ಟೆಲ್ಲಾ ಗೊತ್ತಿದ್ರು ಶಾಸಕರು ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿ ತಮ್ಮ ಬೆಂಬಲಿಗನ ಅದ್ದೂರಿ ಬರ್ತ್ ಡೇಯಲ್ಲಿ ಭಾಗಿಯಾಗುವ ಅವಶ್ಯಕತೆ ಇತ್ತಾ..?  ಇದೆಲ್ಲಾ ಗೊತ್ತಿದ್ರೂ ಯಾಕೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಜನಸಾಮಾನ್ಯರಿಗೆ ಒಂದು ಕಾನೂನು ಜನಪ್ರತಿನಿಧಿಗಳಿಗೆ ಒಂದು ಕಾನೂನಾ..? ಎಂಬ ಪ್ರಶ್ನೆ ಇದೀಗ ಮೂಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

ಚೆನ್ನೈ ವಿರುದ್ಧ ಹಸಿರು ಜೆರ್ಸಿಯಲ್ಲಿ ಆರ್​ ಸಿ ಬಿ ಕಣಕ್ಕೆ..! ಕಾರಣ ಏನ್ ಗೊತ್ತಾ?

  ದುಬೈ :  13 ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಳೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣೆಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ...

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

Recent Comments