Home ರಾಜ್ಯ ರಮೇಶ್ ಜಾರಕಿಹೊಳಿಗೆ ಕೋವಿಡ್: ಎರಡು ರೀತಿಯಲ್ಲಿ ಹೇಳಿಕೆ ಪಡೆಯುವ ಸಾಧ್ಯತೆ

ರಮೇಶ್ ಜಾರಕಿಹೊಳಿಗೆ ಕೋವಿಡ್: ಎರಡು ರೀತಿಯಲ್ಲಿ ಹೇಳಿಕೆ ಪಡೆಯುವ ಸಾಧ್ಯತೆ

ಬೆಂಗಳೂರು:  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ರಮೇಶ್ ಜಾರಕಿಹೊಳಿ ಅವರಿಗೆ ಕೊರೊನಾ ಪಾಸಿಟಿವ್ ಡೃಢ ಪಟ್ಟಿರುವ ಹಿನ್ನೆಲೆಯಲ್ಲಿ, ಎಸ್ಐಟಿ ತನಿಖೆಗೆ ಬ್ರೇಕ್ ಬಿದ್ದಿದೆ. ಕಳೆದ ಶುಕ್ರವಾರ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಬೇಕಿತ್ತು. ಸಾಹುಕಾರನ ಕ್ವಾರೆಂಟೈನ್ ಅವಧಿ ಮುಗಿಯೋವರೆಗೂ ಎಸ್ಐಟಿ ತನಿಖೆ ತಡೆಹಿಡಿಯಲಾಗುತ್ತಾ, ಎರಡು ರೀತಿಯಲ್ಲಿ ತನಿಖಾಧಿಕಾರಿಗಳು ಹೇಳಿಕೆ ಪಡೆಯುವ ಸಾಧ್ಯತೆಗಳಿದ್ದು,  ರಮೇಶ್ ಜಾರಕಿಹೊಳಿ ಪಪಿಇ ಕಿಟ್ ಧರಿಸಿ ತನಿಖೆಗೆ ಹಾಜರಾಗಬಹುದು ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ತನಿಖಾಧಿಕಾರಿಗಳು ಹೇಳಿಕೆ ಪಡೆಯಬಹುದಾಗಿದೆ. ಅನೇಕ ಪ್ರಕರಣಗಳಲ್ಲಿ ಇದೇ ರೀತಿಯಾದ ಹೇಳಿಕೆ ಪಡೆದಿರುವ ಉದಾಹರಣೆಗಳಿವೆ. 

ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ, ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಕೊವಿಡ್ ಆತಂಕದಲ್ಲಿದ್ದಾರೆ. ರಮೇಶ್ ಜಾರಕಿಹೊಳಿಗೆ ವಿಚಾರಣೆ ನಡೆಸಿದ ಪೊಲೀಸರು ಸಹ ಕೊರೋನಾ ತಪಾಸಣೆ ಮಾಡಿಸಿಕೊಳ್ಳುತ್ತಾರಾ, ಕ್ವಾರಂಟೈನ್  ಗೆ ಒಳಗಾಗುತ್ತಾರಾ ಎನ್ನುವ ಪ್ರಶ್ನೆಗಳು ಎದ್ದಿವೆ.

LEAVE A REPLY

Please enter your comment!
Please enter your name here

- Advertisment -

Most Popular

ಧನ್ವಂತರಿ ಹೋಮದ ಮೊರೆ ಹೋದ ಸಚಿವ ಈಶ್ವರಪ್ಪ..!

ಶಿವಮೊಗ್ಗ : ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಶೀಘ್ರದಲ್ಲೇ ಇಳಿಮುಖ ಕಾಣಲಿ ಎಂದು ಸಚಿವ ಈಶ್ವರಪ್ಪ, ಹೋಮದ ಮೊರೆ ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೆ, ಏರಿಳಿತ ಕಾಣುತ್ತಿರುವ ಹಿನ್ನೆಲೆಯಲ್ಲಿ,...

ಕೊಪ್ಪಳದಲ್ಲಿ ಒಂದು ಬ್ಲಾಕ್ ಫಂಗಸ್ ಕೇಸ್ ಪತ್ತೆ..!

ಕೊಪ್ಪಳ: ಕೊರೊನಾ ಎರಡನೇ ಅಲೆ ತೀವ್ರವಾಗಿ ಪ್ರಸರಣವಾಗುತ್ತಿರುವ ಈ ಸಂದರ್ಭದಲ್ಲಿ ಮತ್ತೊಂದು ಆತಂಕ ಎದುರಾಗಿದ್ದು, ಬ್ಲ್ಯಾಕ್​ ಫಂಗಸ್​ ಹರಡುವಿಕೆ ಬಗ್ಗೆ ಭಯ ಶುರುವಾಗಿದೆ. ಹೀಗಿರುವಾಗಲೇ ಕೊಪ್ಪಳ ಜಿಲ್ಲೆಯಲ್ಲಿ ಬ್ಲ್ಯಾಕ್​ ಫಂಗಸ್ ಕಾಣಿಸಿಕೊಂಡಿದೆ ಎಂದು...

‘ತೌಕ್ತೆ’ ಅವಾಂತರಕ್ಕೆ ಕತ್ತಲಲ್ಲಿ ಉತ್ತರಕನ್ನಡ ಬೆಳಕು ನೀಡಲು ಹೆಸ್ಕಾಂ ಸಿಬ್ಬಂದಿಗಳಿಂದ ಸಾಹಸ..!

ಕಾರವಾರ : ತೌಕ್ತೆ ಚಂಡಮಾರುತ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ಒಂದೆಡೆ ಕಡಲು ಉಕ್ಕೇರಿ ಕಡಲತೀರದ ಮಂದಿ ಸಂಕಷ್ಟಕ್ಕೆ ಸಿಲುಕಿದ್ದರೇ ಇನ್ನೊಂದೆಡೆ ಎಲ್ಲೆಡೆ ಮರಗಿಡಗಳು ಉರುಳಿ ವಿದ್ಯುತ್ ಕಂಬಗಳು ಬುಡಮೇಲಾಗಿವೆ. ಪರಿಣಾಮ ಉತ್ತರಕನ್ನಡ ಜಿಲ್ಲೆಯ...

‘ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ವೈದ್ಯರ ತಂಡ ಯಶಸ್ವಿ’

ಶಿವಮೊಗ್ಗ: ಪ್ರಾಣದ ಹಂಗನ್ನೂ ಲೆಕ್ಕಿಸದೇ ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯರ ತಂಡ ಕೋರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿಗೆ ಮೂರನೇ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ....

Recent Comments