ಬೆಂಗಳೂರು: ಜನವರಿ 2 ರಂದು ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿಯೂ ಕೊವಿಡ್-19 ಲಸಿಕೆ ನೀಡುವ ಪೂರ್ವಾಭ್ಯಾಸ ನಡೆಯಲಿದೆ. ಈ ಕರಿತು ಇಂದು ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಕ್ಕೂ ಮುನ್ನ ಆಂಧ್ರ ಪ್ರದೇಶ, ಗುಜರಾತ್, ಪಂಜಾಬ್ ಮತ್ತು ಅಸ್ಸಾಂಗಳಲ್ಲಿ ಲಸಿಕೆ ವಿತರಣೆ ವ್ಯವಸ್ಥೆ ಕುರಿತ ಸಿದ್ಧತೆಯನ್ನು ಮೌಲ್ಯಮಾಪನ ಮಾಡಲು ನಡೆಸಲಾಗಿದ್ದ ಎರಡು ದಿನಗಳ ಪೂರ್ವಾಭ್ಯಾಸ ಯಶಸ್ವಿಯಾಗಿದೆ.
ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳು ತಮ್ಮ ರಾಜಧಾನಿಯನ್ನು ಹೊರತುಪಡಿಸಿ ಪ್ರಮುಖ ನಗರಗಳಲ್ಲಿ ಕೊವಿಡ್-19 ಲಿಸಿಕೆ ನೀಡುವ ತಾಲೀಮು ನಡೆಸುವ ಸಾಧ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಲಸಿಕೆ ನೀಡುವ ಕುರಿತು ಹಲವಾರು ರಾಜ್ಯಗಳು ಸೂಕ್ತ ಕಾರ್ಯ ಯೋಜನೆಯನ್ನು ರೂಪಿಸಿವೆ ಎಂದು ತಿಳಿದು ಬಂದಿದೆ.