ಹುಬ್ಬಳ್ಳಿ : ಅಖಿಲ ಭಾರತ ಆಡಳಿತ ಸೇವೆಯಲ್ಲಿ ದಿವ್ಯಾಂಗರಿಗೆ ಪ್ರಾತಿನಿಧ್ಯ ಒದಗಿಸಲಾಗಿದೆ. ಪ್ರತಿ ವರ್ಷವೂ ಉನ್ನತ ಮಟ್ಟದ ಅಧಿಕಾರಿಗಳಾಗಿ ದಿವ್ಯಾಂಗರು ಹೊರ ಬರುತ್ತಿದ್ದಾರೆ. ವಿಕಲ ಚೇತನರು ಆತ್ಮ ವಿಶ್ವಾಸದಿಂದ ಜೀವನ ನೆಡೆಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ್ ಹೇಳಿದರು.
ಜ್ಯೋತಿರ್ಗಮಯ ದೃಷ್ಟಿ ವಿಕಲಚೇತನರ ಬೋಧಕರ ಸಂಘದಿಂದ ಹುಬ್ಬಳ್ಳಿಯ ಆನಂದ ನಗರದ ಅಂಧ ಮಕ್ಕಳ ಸರ್ಕಾರಿ ಪಾಠ ಶಾಲೆಯಲ್ಲಿ ಆಯೋಜಿಸಲಾದ ದಂತ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಹಲ್ಲು ಹಾಗೂ ಬಾಯಿಯ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಕನ್ನಡ ಭಾಷೆಯಲ್ಲಿ ಮುದ್ರಿಸಲಾದ ಹಲ್ಲಿನ ಶಿಕ್ಷಕರು ಬ್ರೈಲ್ ಪುಸ್ತಕ, ದೃಷ್ಟಿ ವಿಕಲ ಚೇತನರಿಗೆ ಸಹಕಾರಿಯಾಗಿದೆ.
ಇಂದಿನ ದಂತ ಕಾರ್ಯಾಗಾರದಲ್ಲಿ 21 ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಇವರು ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಜ್ಯೋತಿರ್ಗಮಯ ದಂತ ಸಂರಕ್ಷಣಾ ಸಂಸ್ಥೆ ದಂತ ಆರೋಗ್ಯದ ಕುರಿತು ಕನ್ನಡದಲ್ಲಿ ಬ್ರೈಲ್ ಪುಸ್ತಕ ಹೊರತಂದಿದ್ದು ಶ್ಲಾಘನೀಯವಾಗಿದೆ ಎಂದರು.