Home ರಾಜ್ಯ ಬೆಂಗಳೂರು ಮೊದಲ ಮಳೆಗೆ ಬೆಂಗಳೂರಲ್ಲಿ ಭೂ ಕುಸಿತ!

ಮೊದಲ ಮಳೆಗೆ ಬೆಂಗಳೂರಲ್ಲಿ ಭೂ ಕುಸಿತ!

ಬೆಂಗಳೂರು: ಇಂದು ರಾಜ್ಯದ ಹಲವೆಡೆ ಮಳೆಯಾಗಿದೆ. ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆಯ ನಡುವೆ ಭೂ ಕುಸಿತವಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಲಗ್ಗೆರೆಯ ಪ್ರೀತಿ ನಗರದಲ್ಲಿ ಭೂ ಕುಸಿತಗೊಂಡಿದ್ದು,ಕಾರು, ಬೈಕ್, ಆಟೋ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿವೆ.ಈ ಪ್ರದೇಶದಲ್ಲಿ ಚರಂಡಿ ಪೈಪ್ ಒಡೆದಿತ್ತು. ಹಾಗಾಗಿ ಸತತ ಮಳೆಯೂ ಬಂದಿದ್ದರಿಂದ ರಸ್ತೆಯೂ ಕುಸಿದಿದೆ. 

ಅಲ್ಲದೆ ಭಾರೀ ಮಳೆಗೆ ನಗರದ ಹಲವೆಡೆ ಮರಗಳು ಧರೆಗುರುಳಿದಿದ್ದು, ಯಶವಂತಪುರ ಪೊಲೀಸ್ ಸ್ಟೇಷನ್ ‌ಹಿಂಭಾಗ ಒಂದು ಮರ, ಮಾರ್ಗೊಸಾ ರಸ್ತೆಯಲ್ಲಿ ಒಂದು ಮರ ಹಾಗೂ ಕುರುಬಹಳ್ಳಿಯ ಕಿರ್ಲೋಸ್ಕರ್​ ಕಾಲೋನಿಯಲ್ಲಿ ಹಲವು ಮರಗಳು ನೆಲಕ್ಕುರುಳಿವೆ. ಈ ಕುರಿತು ಬಿಬಿಎಂಪಿ ಕಂಟ್ರೋಲ್‌ ರೂಂಗೆ ಮಾಹಿತಿ ನೀಡಲಾಗಿದೆ.

 

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments