Home ರಾಜ್ಯ ನಕಲಿ ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ದರೋಡೆ

ನಕಲಿ ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ದರೋಡೆ

ಹಾಸನ : ಪೊಲೀಸರ ಸೋಗಿನಲ್ಲಿ ಬಂದು ಮನೆಯಲ್ಲಿದ್ದ ಚಿನ್ನಾಭರಣ ದರೋಡೆ ಮಾಡಿಕೊಂಡು‌ ಹೋಗಿರುವಂತಹ ಘಟನೆ ಹಾಸನ‌ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.‌ ಗ್ರಾಮದ ನಂಜೇಗೌಡ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ಮನೆಯವರ ಕಣ್ಣೆದುರೇ ನಕಲಿ ಪೊಲೀಸರು ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾರೆ.‌

ಆಗಸ್ಟ್ 17 ರ ರಾತ್ರಿ 9.15ರ ಸುಮಾರಿನಲ್ಲಿ ಇನೋವಾ ಕಾರಿನಲ್ಲಿ‌ ಬಂದ ಟೀಂ, ನಾವು ಬೆಂಗಳೂರು ಪೊಲೀಸರು, ಬೆಂಗಳೂರಿನಿಂದ ಬಂದಿದ್ದೇವೆ ಎಂದಿದ್ದಾರೆ. ನಿಮ್ಮ ತಮ್ಮ ಲಕ್ಷ್ಮಣಗೌಡ ಬೆಂಗಳೂರನಲ್ಲಿ ಕಳ್ಳತನ ಮಾಡಿ ದೋಚಿಕೊಂಡು ಬಂದಿದ್ದಾನೆ. ಅವರನ್ನು ಹುಡುಕುತ್ತಿದ್ದೇವೆ. ನಾವು ನಿಮ್ಮ ಮನೆಯನ್ನು ಸರ್ಚ್ ಮಾಡಬೇಕು ಎಂದಿದ್ದಾರೆ. ನಾನು ಬೆಂಗಳೂರಿನಲ್ಲಿಲ್ಲ. ಚಾಮರಾಜನಗರದಲ್ಲಿರೋದು ಎಂದು ನಂಜೇಗೌಡ ಉತ್ತರಿಸಿದರೂ ಗದರಿದ್ದಾರೆ. ಆ ಹಣವನ್ನು‌ ಎಲ್ಲಿ ಇಟ್ಟಿದ್ದಾನೆ ಎಂದು ಮನೆಯವರನ್ನು ಗದರಿಸಿ ಸರ್ಚ್ ಮಾಡಿದ್ದಾರೆ. ಮನೆಯಲ್ಲಿದ್ದ 12 ಗ್ರಾಂನ ಚಿನ್ನದ ಸರ, 8 ಗ್ರಾಂನ ಚಿನ್ನದ ಓಲೆ ಹಾಗೂ 5 ಗ್ರಾಂನ ಉಂಗುರ ಸೇರಿ‌ 25 ಗ್ರಾಂ ಗೂ ಅಧಿಕ‌‌ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ‌.

ಹೋಗುವ ಮುನ್ನ ನೀವೆಲ್ಲಾ ಬೆಳಗ್ಗೆ ಚನ್ನರಾಯಪಟ್ಟಣ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿ‌ಹೋಗಿದ್ದಾರೆ. ಮರುದಿನ ನಂಜೇಗೌಡರ  ತಮ್ಮ ಲಕ್ಷ್ಮಣಗೌಡ ಚಾಮರಾಜನಗರದಿಂದ ಬಂದು ನೋಡಿದಾಗ ವಿಚಾರ ಗೊತ್ತಾಗಿದೆ. ಬಳಿಕ ನಿನ್ನೆ‌ ಸಂಜೆ ಚನ್ನರಾಯಪಟ್ಟಣ ನಗರ ಪೊಲೀಸ್‌ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ಪೊಲೀಸ್ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

-ಪ್ರತಾಪ್ ಹಿರೀಸಾವೆ

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments