Home ಕ್ರೀಡೆ P.Cricket ಸೋಲಿನ ನಡುವೆಯೂ ರೋಹಿತ್ ಶರ್ಮಾ ದಾಖಲೆ..!

ಸೋಲಿನ ನಡುವೆಯೂ ರೋಹಿತ್ ಶರ್ಮಾ ದಾಖಲೆ..!

ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಅತಿಥೇಯ ಇಂಗ್ಲೆಂಡ್ ವಿರುದ್ಧ 31ರನ್​ಗಳಿಂದ ಸೋತಿದೆ. ಪ್ರಸಕ್ತ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾದ ಮೊದಲ ಸೋಲಿದು. ಈ ಸೋಲಿನ ನಡುವೆಯೂ ಹಿಟ್ ಮ್ಯಾನ್ ರೋಹಿತ್ ಶರ್ಮಾ ದಾಖಲೆ ಬರೆದಿದ್ದಾರೆ.
ರೋಹಿತ್ ಶರ್ಮಾ ನಿನ್ನೆ 102ರನ್ ಸಿಡಿಸಿ ಮಿಂಚಿದ್ರು. ಇದು ಈ ಟೂರ್ನಿಯಲ್ಲಿ ರೋಹಿತ್ ಸಿಡಿಸಿದ ಮೂರನೇ ಸೆಂಚುರಿ. ದಕ್ಷಿಣ ಆಫ್ರಿಕಾ ವಿರುದ್ಧ 122, ಪಾಕ್​ ವಿರುದ್ಧ 144 ರನ್ ಬಾರಿಸಿದ್ದ ಹಿಟ್​ ಮ್ಯಾನ್​ ಇಂಗ್ಲೆಂಡ್ ಬೌಲರ್​ಗಳನ್ನೂ ಕಾಡಿದ್ರು. ಒಂದೇ ವಿಶ್ವಕಪ್​ ನಲ್ಲಿ 3 ಸೆಂಚುರಿ ಬಾರಿಸಿದ ಭಾರತದ 2ನೇ ಬ್ಯಾಟ್ಸ್​​​ಮನ್​ ಅನ್ನೋ ಕೀರ್ತಿಗೆ ಭಾಜನರಾಗಿದ್ದಾರೆ. ಮಾಜಿ ನಾಯಕ ಸೌರವ್ ಗಂಗೂಲಿ 2003 ವರ್ಲ್ಡ್​​ಕಪ್​ನಲ್ಲಿ ಈ ಸಾಧನೆ ಮಾಡಿದ್ದರು. ಆ ಬಾರಿ ಗಂಗೂಲಿ ನಾಯಕತ್ವದಲ್ಲಿ ಭಾರತದ ಫೈನಲ್ ಪ್ರವೇಶಿಸಿತ್ತು.

LEAVE A REPLY

Please enter your comment!
Please enter your name here

- Advertisment -

Most Popular

5 ವರ್ಷದ ಬಾಲಕಿ ಕಾಣೆ

ಬೆಂಗಳೂರು : ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 5 ವರ್ಷದ ಬಾಲಕಿ ಕಾಣೆಯಾಗಿದ್ದಾಳೆ. ಲೋಕಿತ ಕೆ.ಮರನ್ ಕಾಣೆಯಾಗಿರುವ ಬಾಲಕಿ‌. ಈಕೆ ತನ್ನ ತಾತನ ಜೊತೆ ಸೆ.18 ರಂದು ಮನೆಯಿಂದ ತೆರಳಿದ್ದಳು. ಮೆಜೆಸ್ಟಿಕ್ ನಿಲ್ದಾಣದಲ್ಲಿ...

ಅಕ್ಕ ಗೌರಿ ಲಂಕೇಶ್​ರನ್ನು ನೆನೆದು ಕಣ್ಣೀರಿಟ್ಟ ಇಂದ್ರಜಿತ್ ಲಂಕೇಶ್..!

ಬೆಂಗಳೂರು : ಸ್ಯಾಂಡಲ್​​ವುಡ್​ ಡ್ರಗ್ಸ್​ ಮಾಫಿಯಾ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಸಿಬಿ ವಿಚಾರಣೆ ಎದುರಿಸಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗುತ್ತಿದ್ದಾರೆ.  ಇಂದು ಸಿಸಿಬಿ ವಿಚಾರಣೆಗೆ ಹೋಗುವ...

ಸ್ಯಾಂಡಲ್​​ವುಡ್​​​​​ನಲ್ಲಿ ಡ್ರಗ್​ ಮಾಫಿಯಾ : ಇಂದು ಸಿಸಿಬಿಯಿಂದ ನಟಿ ರಾಗಿಣಿ ವಿಚಾರಣೆ

ಬೆಂಗಳೂರು :  ಸ್ಯಾಂಡಲ್​​​​ವುಡ್​​ನಲ್ಲಿ ಡ್ರಗ್​​ ಮಾಫಿಯಾದ ಬಗ್ಗೆ ಬಿಸಿಬಿಸಿ ಚರ್ಚೆ ನಡೀತಾ ಇದೆ. ಚಂದನವನಕ್ಕೆ ಮಾದಕ ಜಾಲ ಹಬ್ಬಿದೆಯೇ ಅಥವಾ ಇಲ್ಲವೇ ಅನ್ನೋದು ಸದ್ಯದ ಗಾಂಧಿನಗರದ ಹಾಟ್ ಸುದ್ದಿ. ಇದಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ...

ಕೊರೋನಾದಿಂದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನ

ಶಿವಮೊಗ್ಗ : ಭದ್ರಾವತಿಯ ಜೆಡಿಎಸ್ ನ ಮಾಜಿ ಶಾಸಕ ಅಪ್ಪಾಜಿಗೌಡ ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರು,  ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅಪ್ಪಾಜಿಗೌಡರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ...

Recent Comments