Home ಕ್ರೀಡೆ P.Cricket ರೋಹಿತ್​​ ಶರ್ಮಾಗೆ ಕ್ಯಾಪ್ಟನ್​ ಕೊಹ್ಲಿಯಿಂದ ಹೊಸ ಹೊಣೆ..!

ರೋಹಿತ್​​ ಶರ್ಮಾಗೆ ಕ್ಯಾಪ್ಟನ್​ ಕೊಹ್ಲಿಯಿಂದ ಹೊಸ ಹೊಣೆ..!

ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್​ ಕೊಹ್ಲಿ ವೈಸ್ ಕ್ಯಾಪ್ಟನ್ ರೋಹಿತ್ ಶರ್ಮಾಗೆ ಹೊಸ ಜವಬ್ದಾರಿ ನೀಡಿದ್ದಾರೆ. ಎಲ್ರಿಗೂ ಗೊತ್ತೇ ಇದೆ… ರೋಹಿತ್ ಶರ್ಮಾ ಆನ್​ ಸ್ಪಾರ್ಟ್​ನಲ್ಲಿ ಡಿಸಿಷನ್ ತಗೋಳದ್ರಲ್ಲಿ ಎತ್ತಿದ ಕೈ. ರೋಹಿತ್ ಎಂಥಾ ನಾಯಕ ಅನ್ನೋದು ಈಗಾಗಲೇ ಜಗಜ್ಜಾಹಿರವಾಗಿದೆ. ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ತಂಡವನ್ನು ಯಶಸ್ವಿಯಾಗಿ ಮುನ್ನೆಡಿಸಿ ಮೂರು ಬಾರಿ ಚಾಂಪಿಯನ್​ ಪಟ್ಟಕ್ಕೇರಿಸಿರುವುದೇ ಇದಕ್ಕೆ ಸಾಕ್ಷಿ.
ರೋಹಿತ್ ಲೀಡರ್ ಶಿಪ್​ ಬಗ್ಗೆ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ ಮತ್ತು ಕ್ಯಾಪ್ಟನ್ ಕೊಹ್ಲಿಗೂ ಗೊತ್ತು. ಹೀಗಾಗಿ ಅವರಿಗೆ ಹೊಸ ಹೊಣೆ ನೀಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಯುವಕರಿಗೆ ಮಾರ್ಗದರ್ಶನ ನೀಡಲು ರೋಹಿತ್ ಶರ್ಮಾಗೆ ತಿಳಿಸಲಾಗಿದೆ. ರೋಹಿತ್ ಶರ್ಮಾ ಲೀಡರ್​ಶಿಪ್ ಗ್ರೂಪ್​ನಲ್ಲಿರೋದು ನಿಜ. ಆದ್ರೆ, ಇದೇ ಮೊದಲ ಬಾರಿಗೆ ಅವರು ತನ್ನ ಐಡಿಯಾಗಳನ್ನು ಆಟಗಾರರ ಬಳಿ ಹೇಳಿಕೊಳ್ತಿಲ್ಲ. ತಂಡದ ಕ್ಯಾಪ್ಟನ್ ಕೊಹ್ಲಿ ಮತ್ತು ಕೋಚ್​ಗೆ ರೋಹಿತ್ ಶರ್ಮಾ ಲೀಡರ್​ ಶಿಪ್ ಬಗ್ಗೆ ನಂಬಿಕೆ ಇದೆ. ಆದ್ದರಿಂದ ಬೌಲರ್​ಗಳ ಬಳಿ ಹೋಗಿ ಎದುರಾಳಿ ವಿಕೆಟ್​ ಪಡೆಯೋದು ಹೇಗೆ ಅಂತ ಸೂಚಿಸುವುದು ಒಳ್ಳೆಯ ಬೆಳವಣಿಗೆ ಎಂದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಹೇಳಿದೆ. ಹೀಗೆ ಕೊಹ್ಲಿ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಯುವಕರಿಗೆ ಮಾರ್ಗದರ್ಶನ ನೀಡುವ ಹೊಣೆಯನ್ನು ವಹಿಸಿದೆ.

LEAVE A REPLY

Please enter your comment!
Please enter your name here

- Advertisment -

Most Popular

ದೇಶದಲ್ಲಿ  24 ಗಂಟೆಗಳಲ್ಲಿ 48,648 ಕೊರೋನಾ ಕೇಸ್ ಪತ್ತೆ!

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 48,648 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 80,88,851ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ...

 ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯ ಕಿಡ್ನಾಪ್​!

ಕೊಪ್ಪಳ : ಸಿನಿಮೀಯ ರೀತಿಯಲ್ಲಿ ನಗರಸಭೆ ಸದಸ್ಯನನ್ನು ಕಿಡ್ನಾಪ್ ಮಾಡಲಾಗಿದೆ. ಕಿಡ್ನಾಪ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನವೆಂಬರ್ 2 ರಂದು ನಗರಸಭೆ ಚುನಾವಣೆ ನಡೆಯಲಿದ್ದು, ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ...

ಅಲಹಬಾದ್​ ಹೈಕೋರ್ಟ್ ನಿಗಾದಲ್ಲಿ ಹತ್ರಾಸ್​ ಗ್ಯಾಂಗ್ ರೇಪ್​ ಕೇಸ್ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ : ಉತ್ತರ ಪ್ರದೇಶ ಹತ್ರಾಸ್​​​​ ಗ್ಯಾಂಗ್​ ರೇಪ್​​ ಪ್ರಕರಣದ ತನಿಖೆ ಅಲಹಬಾದ್​ ಹೈಕೋರ್ಟ್​ ನಿಗಾದಲ್ಲಿ ನಡೆಯಬೇಕೆಂದು ಸುಪ್ರೀಂ ಕೋರ್ಟ್​ ಆದೇಶಿಸಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖಾ ತಂಡದಲ್ಲಿರುವ ಅಧಿಕಾರಿಗಳನ್ನು ರಾಜ್ಯದಿಂದ...

ಡಿ.ಬಾಸ್​​ಗಾಗಿ ಕನ್ನಡ ಕಲಿತ ಜಗಮಪತಿ ಬಾಬು..!

ಸಾಲ್ಟ್ ಅಂಡ್ ಪೆಪ್ಪರ್ ಲುಕ್​ನಲ್ಲಿ ಸೌತ್​ನಲ್ಲಿ ಸಂಚಲನ ಸೃಷ್ಠಿಸಿರೋ ಜಗಪತಿ ಬಾಬು, ಮತ್ತೊಂದು ನೂತನ ದಾಖಲೆ ಬರೆದಿದ್ದಾರೆ. ಅದೂ ಡಿ ಬಾಸ್ ದರ್ಶನ್​ಗಾಗಿ ಅನ್ನೋದು ವಿಶೇಷ. ಇಷ್ಟಕ್ಕೂ ಮೋಸ್ಡ್ ಡಿಮ್ಯಾಂಡಿಂಗ್ ಜಗಪತಿ ಬಾಬು...

Recent Comments