Home ರಾಜ್ಯ ಬೆಂಗಳೂರು ‘ರಾಜ್ಯದಲ್ಲಿ ನಾಳೆ ವ್ಯಾಕ್ಸಿನ್ ಡ್ರೈ ರನ್‌ ಅಭಿಯಾನಕ್ಕೆ ಚಾಲನೆ’

‘ರಾಜ್ಯದಲ್ಲಿ ನಾಳೆ ವ್ಯಾಕ್ಸಿನ್ ಡ್ರೈ ರನ್‌ ಅಭಿಯಾನಕ್ಕೆ ಚಾಲನೆ’

ಬೆಂಗಳೂರು: ರಾಜ್ಯದ 5 ಜಿಲ್ಲೆಗಳು ಕೊರೋನಾ ವ್ಯಾಕ್ಸಿನ್ ಡ್ರೈರನ್ ಗೆ ಆಯ್ಕೆಯಾಗಿವೆ ಎಂದು ಆರೋಗ್ಯ ಇಲಾಖೆ ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಶಿವಮೊಗ್ಗ ಜಿಲ್ಲೆಯು ಆಯ್ಕೆಯಾಗಿವೆ ಎಂದು ಹೇಳಿದ್ದಾರೆ. ನಾಳೆ ವ್ಯಾಕ್ಸಿನ್ ಡ್ರೈ ರನ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾ ಕೇಂದ್ರ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈ ರನ್ ಲಸಿಕೆ ಬಂದ ಕೂಡಲೇ ರಾಜ್ಯದ ಜನರಿಗೆ ನೀಡಲಾಗುತ್ತದೆ ಎಂದು ಇಂದು ಡಾ.ಕೆ.ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಬ್ರಿಟನ್ ನಿಂದ ಇದುವರೆಗೆ 5068 ಮಂದಿ ರಾಜ್ಯಕ್ಕೆ ಬಂದು ಇಳಿದಿದ್ದಾರೆ. ಅವರಲ್ಲಿ 810 ಜನ ಹೊರ ರಾಜ್ಯಗಳ ಪ್ರಾಯಾಣಿಕರಾಗಿದ್ದಾರೆ. 75 ಜನ ಇನ್ನೂ ಸಿಕ್ಕಿಲ್ಲ, ಹುಡುಕಾಟ ನಡೆಯುತ್ತಿದೆ. 70 ಜನ ಬೆಂಗಳೂರಿನವರು, 5 ಜನ ಬೇರೆ ಜಿಲ್ಲೆಯವರಾಗಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ.

ಬ್ರಿಟನ್‌ನಿಂದ ಆಗಮಿಸಿದ 38 ಮಂದಿಗೆ ಕೊರೋನಾ ಸೋಂಕು ಇರುವುದು ದೃಢ ಪಟ್ಟಿದೆ. ಅದರಲ್ಲಿ  ಐವರಿಗೆ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

- Advertisment -

Most Popular

‘ಉಗ್ರ ಸ್ವರೂಪ ಪಡೆಯುತ್ತಿರುವ ಅನ್ನದಾತರ ಹೋರಾಟ’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ರೈತರ ಪ್ರತಿಭಟನೆ ಕ್ಷಣ-ಕ್ಷಣಕ್ಕೂ ಉಗ್ರ ಸ್ವರೂಪ ಪಡೆಯುತ್ತಿದೆ. ರೈತರು ಸಿಂಘು ಬಾರ್ಡ್ ನಿಂದ ದೆಹಲಿ ರಿಂಗ್ ರೋಡ್ ಗೆ...

ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು..!

ಬೆಂಗಳೂರು: ಬೆಂಗಳೂರಿನಲ್ಲಿ ಸಿಡಿದೆದ್ದ ಅನ್ನದಾತರು. ಬೆಂಗಳೂರಿನ ಹೆಬ್ಬಾಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ರೈತರು ಪ್ರತಿಭಟನೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸರು ಹೆಬ್ಬಾಳದ ಮುಖ್ಯ ರಸ್ತೆಗೆ ಬ್ಯಾರಿಕೆಡ್ ಗಳನ್ನು ಹಾಕಿ ತಡೆಹಿಡೆಯಲಾಗಿದೆ. 50ಕ್ಕೂ ಹೆಚ್ಚು ಕಾರು...

‘ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನೆಗೆ ಚಾಲನೆ’

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆರಂಭವಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ರೈತರು ಆಗಮಿಸಿದ್ದಾರೆ. ನಗರದ ಆರು ದಿಕ್ಕೂಗಳಿಂದ ರೈತರು ಬರುತ್ತಿದ್ದಾರೆ. ರಾಷ್ಟ್ರಗೀತೆ ಹಾಡುವ ಮೂಲಕ ರ್ಯಾಲಿಗೆ ಚಾಲನೆ...

‘ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಜ್’

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ದೆಹಲಿಯ ಸಿಂಘು, ಟಿಕ್ರಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ದೆಹಲಿಯಲ್ಲಿ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ.   ರೈತರು...

Recent Comments